ಮಹಿಳಾ-ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮ ಹೊಣೆ

ALD0 1
ಅಳವಂಡಿ ಗ್ರಾಪಂನಲ್ಲಿ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕಾವಲು ಸಮಿತಿ ಸಭೆ ನಡೆಯಿತು. ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಉಪಾಧ್ಯಕ್ಷೆ ಶಾರಮ್ಮ ಈಳಿಗೇರ, ಪಿಡಿಒ ಕೊಟ್ರಪ್ಪ, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
Published on

ಅಳವಂಡಿ: ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ ತಿಳಿಸಿದರು.

ಇಲ್ಲಿನ ಗ್ರಾಪಂನಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕಾವಲು ಸಮಿತಿ ಸಭೆ ಉದ್ದೇಶಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗುವ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪಿಡಿಒ ಕೊಟ್ರಪ್ಪ ಅಂಗಡಿ ಮಾತನಾಡಿ, ಬಾಲ್ಯವಿವಾಹ ಪದ್ಧತಿ ತಡೆಗಟ್ಟಲು ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಶಿಕ್ಷಣದ ಮಹತ್ವ ತಿಳಿಸುವುದು, ಕಾನೂನುಗಳನ್ನು ಪಾಲಿಸುವುದು ಮುಖ್ಯವಾಗಿದೆ.

ಬಾಲ್ಯವಿವಾಹದಿಂದ ಮಕ್ಕಳು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ತೊಂದರೆಗೊಳಗಾಗುತ್ತಾರೆ. ಇಂಥ ಕಾನೂನುಬಾಹಿರ ಪದ್ಧತಿಗಳಿಂದ ದೂರವಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.

ಅಂಗನವಾಡಿ ಮೇಲ್ವಿಚಾರಕಿ ರೆಹಮತ್‌ಬೀ ಮಾತನಾಡಿದರು. ಗ್ರಾಪಂ ಉಪಾಧ್ಯಕ್ಷೆ ಶಾರಮ್ಮ ಈಳಿಗೇರ, ಸದಸ್ಯೆ ಸುವರ್ಣ ಅರಳಲೆಮಠ, ಪ್ರಾಚಾರ್ಯ ಅಶೋಕ ಕೊಣ್ಣೂರ, ಸಿಆರ್‌ಪಿ ವಿಜಯಕುಮಾರ ಟಿಕಾರೆ, ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ, ಕೆಎಚ್‌ಪಿಟಿ ಸಮುದಾಯ ಸಂಘಟಕಿ ಅನ್ನಪೂರ್ಣ, ಮುಖ್ಯಶಿಕ್ಷಕಿ ಗ್ಯಾನಮ್ಮ ಹಳ್ಳಿಕೇರಿ, ಪ್ರಮುಖರಾದ ಭವಾನಿ, ಮಾರುತಿ ಕಾತರಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net