ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯಲಿ

18ALD04
Published on

ಅಳವಂಡಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ವಿಶೇಷ ಮಹಿಳಾ ಗ್ರಾಮಸಭೆ ನಡೆಯಿತು.

ಗ್ರಾಪಂ ಅಧ್ಯಕ್ಷೆ ಭಾರತಿ ಬೆಣಕಲ್ ಮಾತನಾಡಿ, ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು. ಹೆಣ್ಣು ಮಕ್ಕಳಿಗೆ ಪಾಲಕರು ಉನ್ನತ ಶಿಕ್ಷಣ ನೀಡಲು ಮುಂದಾಗಬೇಕೆಂದು ತಿಳಿಸಿದರು.

ಮುಖ್ಯಪೇದೆ ಮಾರುತಿ ಪೂಜಾರ ಮಾತನಾಡಿ, ಉತ್ತಮ ನಾಗರಿಕ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಸರ್ಕಾರ ಮಹಿಳೆಯರಿಗೆ ವಿವಿಧ ಕ್ಷೇತ್ರಗಳಲ್ಲಿ ಆದ್ಯತೆ ನೀಡಿದೆ. ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು. ಮಹಿಳೆಯರು ಸಮಸ್ಯೆಗಳಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಧೈರ್ಯದಿಂದ ಸ್ವಾವಲಂಬಿ ಜೀವನ ನಡೆಸಬೇಕು ಎಂದರು.

ಗ್ರಾಪಂ ಉಪಾಧ್ಯಕ್ಷೆ ಶಂಕ್ರಮ್ಮ ಜೋಗಿನ, ಪ್ರಮುಖರಾದ ಶಶಿಕಲಾ, ಸುವರ್ಣಾ, ಮಲ್ಲಮ್ಮ ಕಣವಿ, ಜಯಲಕ್ಷ್ಮೀ, ಸಲಿಮಾ, ಯಲ್ಲಮ್ಮ, ಕಾಳಮ್ಮ, ಪ್ರತಿಭಾ, ರಾಜೇಶ್ವರಿ, ಶಶಿಕಲಾ, ಸುಧಾ, ಫಕೀರಾಬಿ, ರೇಣುಕಾ, ಬಸಮ್ಮ, ಗೀತಾ, ಕಾವೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net