ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ರಾಣೆಬೆನ್ನೂರ: ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಕೋಳ ಗ್ರಾಮದಲ್ಲಿ ಗುರುವಾರ ನಡೆದಿದೆ.

ರಮೇಶ ಪಂಚಾಕ್ಷರಪ್ಪ ಕುದರಿಹಾಳ (50) ಮೃತ ವ್ಯಕ್ತಿ.

ಈತ ಮದ್ಯದ ಚಟಕ್ಕೆ ಅಂಟಿಕೊಂಡು ದುಡಿಯಲು ಆಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net