ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ಸವಣೂರ: ಮದ್ಯ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲಕೋಟಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಮಲ್ಲಿಕಾರ್ಜುನ ಬಸವಣ್ಣೆಪ್ಪ ತಿಮ್ಮಾಪುರ (33) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಚಟಕ್ಕೆ ಅಂಟಿಕೊಂಡಿದ್ದ. ಇದರಿಂದ ಗ್ರಾಮದ ಬಳಿಯಿರುವ ಜಮೀನುವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net