ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಮದ್ಯದ ಚಟಕ್ಕೆ ಅಂಟಿಕೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಖುರ್ದಕೋಡಿಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
ಮಾಲತೇಶ ನಿಂಗಪ್ಪ ಕಜ್ಜರಿ (30) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net