

ಹಿರೇಕೆರೂರ: ಮದ್ಯ ಸೇವನೆ ಬಿಟ್ಟು ಬ್ಯಾಂಕ್ನಲ್ಲಿ ಮಾಡಿದ ಸಾಲ ಕಟ್ಟು ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಮ್ಮಿನೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬಸವರಾಜ ನೀಲಕಂಠಪ್ಪ ಮಳವಳ್ಳಿ (48) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಮದ್ಯ ಸೇವನೆ ಮಾಡುವುದನ್ನು ಬಿಟ್ಟು ಬ್ಯಾಂಕ್ನಲ್ಲಿ ಮಾಡಿದ ಸಾಲ ಕಟ್ಟು ಎಂದು ಬುದ್ಧಿವಾದ ಹೇಳಿದ್ದಳು. ಇದರಿಂದ ಮನೆಯಲ್ಲಿ ಜಗಳ ಮಾಡಿಕೊಂಡಿದ್ದ ಬಸವರಾಜ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.