ಮದ್ಯ ಸೇವನೆಯಿಂದ ಬೇಸತ್ತು ಇಬ್ಬರು ಆತ್ಮಹತ್ಯೆ

Boy Suside+1
Published on

ಹಾವೇರಿ: ಮದ್ಯ ಸೇವನೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಎರಡು ಟನೆ ಭಾನುವಾರ ಶಿಗ್ಗಾಂವಿ ಹಾಗೂ ಹಾನಗಲ್ಲ ತಾಲೂಕಿನಲ್ಲಿ ಸಂಭವಿಸಿವೆ.
ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದ ನಾಗರಾಜ ಕ್ಕೀರಪ್ಪ ನೆಲೋಗಲ್ಲ (38) ಹಾಗೂ ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದ ಗೋಪಾಲ ಪುರುಷೋತ್ತಮ ಮೊಗವೀರ (40) ಮೃತರು.
ನಾಗರಾಜ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋಪಾಲ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆಯಾ ಗ್ರಾಮ ವ್ಯಾಪ್ತಿಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net