

ಬ್ಯಾಡಗಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟ ಘಟನೆ ಪಟ್ಟಣದ ಪುರಸಭೆ ಬಳಿ ಸೋಮವಾರ ನಡೆದಿದೆ.
ಹಿರೇಕೆರೂರ ತಾಲೂಕಿನ ಚಿನ್ನಮುಳಗುಂದ ಗ್ರಾಮದ ನರಸಪ್ಪ ಶಿವಾಜೆಪ್ಪ ಸೂರ್ಯವಂಶಿ (44) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.