ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿದ ವ್ಯಕ್ತಿ ಸಾವು

Crime Logo
Published on

ರಾಣೆಬೆನ್ನೂರ: ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಶಿವರಾಜ ಮೃತ್ಯುಂಜಯ ಆರಾಧ್ಯಮಠ (34) ಮೃತ ವ್ಯಕ್ತಿ.
ಈತ 10 ವರ್ಷಗಳಿಂದ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಮನೆಯಲ್ಲಿ ವಿಪರೀತ ಮದ್ಯ ಸೇವಿಸಿದ ಸಮಯದಲ್ಲಿ ಯಾವುದೋ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net