ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಕುಡಿದು ಸಾವು

Boy Suside+1
Published on

ಬ್ಯಾಡಗಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಕುಡಿದು ಮೃತಪಟ್ಟ ಟನೆ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮಂಜುನಾಥ ಭೀಮಪ್ಪ ಚೂರಿ (35) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಹೊರಬರಲಾಗದೆ ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಗಿನೆಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net