

ಗಂಗಾವತಿ: ವ್ಯಸನಮುಕ್ತ ಸಮಾಜಕ್ಕಾಗಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕ್ರಿಯಾಶೀಲ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜಿಲ್ಲಾ ನಿರ್ದೇಶಕ ಪ್ರಕಾಶರಾವ್ ಹೇಳಿದರು.
ಇದನ್ನೂ ಓದಿ:ಕುಶಾಲನಗರದಲ್ಲಿ ಮದ್ಯವರ್ಜನ ಶಿಬಿರಕ್ಕೆ ಚಾಲನೆ
ತಾಲೂಕಿನ ವಡ್ಡರಹಟ್ಟಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದಲ್ಲಿ ಮಾತನಾಡಿದರು. ಮದ್ಯಪಾನದಿಂದ ಆರೋಗ್ಯದ ಜತೆ ಕುಟುಂಬದ ನೆಮ್ಮದಿ ಹಾಳಾಗುತ್ತಿದ್ದು, ಶಿಬಿರದ ಮೂಲಕ ಕುಡಿತ ಬಿಡಿಸುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಹಿಂದೆ ಆಯೋಜಿಸಿದ್ದ ಶಿಬಿರದಲ್ಲಿ ಭಾಗವಹಿಸಿ ಮದ್ಯಪಾನ ಬಿಟ್ಟವರು ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದರು.
ಸಮಿತಿ ತಾಲೂಕಾಧ್ಯಕ್ಷ ಮುದಿಗೌಡ ಮಾಲಿ ಪಾಟೀಲ್ ಮಾತನಾಡಿ, ಶಿಬಿರದ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಿಸಲಾಗುತ್ತಿದ್ದು, ಸ್ವಾಸ್ಥ್ಯ ಸಮಾಜಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. 7 ದಿನಗಳ ಶಿಬಿರದಲ್ಲಿ 50ಕ್ಕೂ ಹೆಚ್ಚು ಮದ್ಯವ್ಯಸನಿಗಳು ಭಾಗವಹಿಸಿದ್ದರು.
ಗ್ರಾಪಂ ಅಧ್ಯಕ್ಷೆ ಮಂಜುಳಾ ಶಿವಪ್ಪ ಹತ್ತಿಮರದ, ಟಿಎಪಿಸಿಎಂಎಸ್ ನಿರ್ದೇಶಕ ಜೋಗದ ನಾರಾಯಣಪ್ಪ, ವೇದಿಕೆ ಜಿಲ್ಲಾಧ್ಯಕ್ಷ ನೀಲಕಂಠಪ್ಪ ನಾಗಶೆಟ್ಟಿ, ಸದಸ್ಯ ಟಿ.ಸತ್ಯನಾರಾಯಣ, ಟ್ರಸ್ಟ್ ತಾಲೂಕು ಯೋಜನಾಧಿಕಾರಿ ಶಾಂತಾನಾಯ್ಕ, ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ನಾಗೇಶ, ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಜಿ.ವೆಂಕಟೇಶ, ತಾಲೂಕು ವೈದ್ಯಾಧಿಕಾರಿ ಗೌರಿ ಶಂಕರ ಚಿತ್ರೀಕಿ, ಪ್ರಮುಖರಾದ ಮನೋಹರಗೌಡ ಹೇರೂರು, ವೀರೇಶ ಬಲ್ಕುಂದಿ, ಬಜಾರ ನಾರಾಯಣಪ್ಪ, ಈರಣ್ಣ ಕುರಿ, ಜೋಗದ ರವಿನಾಯಕ ಇತರರಿದ್ದರು.