ಮದ್ಯ ಸೇವಿಸಿದ ವ್ಯಕ್ತಿ ಕೆಳಗೆ ಬಿದ್ದು ಸಾವು

Crime Logo
Published on

ಶಿಗ್ಗಾಂವಿ: ವಿಪರೀತ ಮದ್ಯ ಸೇವಿಸಿದ ಅಮಲಿನಲ್ಲಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ತಡಸ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಾರ್ತೇಂಡಪ್ಪ ಗಂಗಪ್ಪ ಸುಣಗಾರ (45) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸಿ ರಸ್ತೆಯಲ್ಲಿ ಬರುತ್ತಿದ್ದಾಗ ಕೆಳಗೆ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net