

ಘಟಪ್ರಭಾ: ಲಾಕ್‌ಡೌನ್ ಆದೇಶದ ಮಧ್ಯೆಯೂ ಸಮೀಪದ ಗಣೇಶವಾಡಿ ಗ್ರಾಮದ ದಂಡಾಪುರ ಕ್ರಾಸ್ ಹತ್ತಿರ ಸೋಮವಾರ ರಾತ್ರಿ ಎಂಎಸ್‌ಐಎಲ್ ಮದ್ಯದ ಅಂಗಡಿಯಲ್ಲಿ 1 ಲಕ್ಷ 55 ಸಾವಿರ ರೂ. ಮೌಲ್ಯದ ಮದ್ಯವನ್ನು ಕಳ್ಳರು ದೋಚಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಶ್ವಾನ ದಳ, ತಾಲೂಕಿನ ಅಬಕಾರಿ ಅಧಿಕಾರಿಗಳು ಹಾಗೂ ಘಟಪ್ರಭಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಲಪ್ಪ ಬಾಲದಂಡಿ ಮತ್ತು ಸಿಬ್ಬಂದಿ ಭೇಟಿ ನೀಡಿ, ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.