

ಜಗಳೂರು: ಅತಿಯಾದ ಮದ್ಯಪಾನದಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಮದ್ಯಮುಕ್ತ ಗ್ರಾಮಗಳನ್ನಾಗಿ ಮಾಡಲು ಧರ್ಮಸ್ಥಳ ಸಂಸ್ಥೆ ಪಣ ತೊಟ್ಟಿದೆ ಎಂದು ಕೆಪಿಸಿಸಿ ಎಸ್ಟಿ ವಿಭಾಗದ ಅಧ್ಯಕ್ಷ ಕೆ.ಪಿ. ಪಾಲಯ್ಯ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧ್ದಿ ಯೋಜನೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಜಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ 1691ನೇ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಮಾಡಬೇಕಾದ ಕೆಲಸಗಳನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ಮನುಷ್ಯನ ಜೀವಿತದಲ್ಲಿ ಏನೇನು ಬೇಕು ಎಂಬುದನ್ನು ಅರ್ಥ ಮಾಡಿಕೊಂಡ ಸಂಸ್ಥೆ ಕಷ್ಟ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಹಕಾರ ನೀಡುತ್ತಿದೆ ಎಂದರು.
ಸಿಪಿಐ ಶ್ರೀನಿವಾಸ್ ಮಾತನಾಡಿ, ಕಾ.ನಿ.ಪ. ಸಂಘದ ಅಧ್ಯಕ್ಷ ಜಿ.ಎಸ್. ಚಿದಾನಂದ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಪ್ರಾಸ್ತವಿಕವಾಗಿ ಮಾತನಾಡಿದರು. ದೇವಿಕೆರೆ ಗ್ರಾಪಂ ಅಧ್ಯಕ್ಷೆ ರಣದಮ್ಮ ಚಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಡಿ.ಡಿ. ಹಾಲಪ್ಪ, ತಾಪಂ ಇಒ ಚಂದ್ರಶೇಖರ್, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಧ.ಗ್ರಾ.ಯೋ ಜಿಲ್ಲಾ ನಿರ್ದೇಶಕ ಎಸ್. ಜನಾರ್ಧನ್, ಮದ್ಯವರ್ಜನ ಶಿಬಿರದ ಗೌ.ಅಧ್ಯಕ್ಷ ಸಿ. ತಿಪ್ಪೇಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಪಿ.ಎಸ್. ಅರವಿಂದ್, ಬಿ. ತಿಪ್ಪೇಸ್ವಾಮಿ, ಸಮಿತಿಯ ಬಿ. ಲೋಕೇಶ್, ಚಿಕ್ಕಮ್ಮನಹಟ್ಟಿ ಮಂಜಣ್ಣ, ಹೊನ್ನೂರಸ್ವಾಮಿ, ರೇವಣ್ಣ, ವಕೀಲ ಕರಿಬಸಯ್ಯ ಇದ್ದರು.