ರೌಡಿಶೀಟರ್‌ಗಳಿಗೆ ಎಚ್ಚರಿಕೆ

kundapura
Published on

ಉಡುಪಿ: ಅಯೋಧ್ಯೆ ಶ್ರೀರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಆಗಸ್ಟ್5 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾನೂನುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರು ಹಲವು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಭಾನುವಾರ ಬೆಳಗ್ಗೆ ಕುಂದಾಪುರ ಪೊಲೀಸರು ರೌಡಿಶೀಟರ್‌ಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಆ.5ರಂದು ಕುಂದಾಪುರ ಟೌನ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅಕ್ರಮ ಗೋ ಸಾಗಾಟ ಮಾಡುವುದು ಅಥವಾ ಸಾಗಾಟಕ್ಕೆ ಸಾತ್ ನೀಡುವುದು, ಕೋಮು ಪ್ರಚೋದನೆೆ, ನೈತಿಕ ಪೊಲೀಸ್‌ಗಿರಿಗೆ ಆಸ್ಪದ ನೀಡುವುದು ಹಾಗೂ ಕಾನೂನುವ್ಯವಸ್ಥೆಗೆ ಧಕ್ಕೆ ಆಗುವಂತಹ ಕೃತ್ಯದಲ್ಲಿ ಭಾಗಿಯಾದಲ್ಲಿ ನಿರ್ಧಾಕ್ಷಿಣ್ಯ ಕ್ರಮಕೈಗೊಂಡು ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಕುಂದಾಪುರ ಠಾಣೆ ಎಸ್‌ಐ ಹರೀಶ್ ನಾಯ್ಕ ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net