ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ

20231222232332_IMG_3589
Published on

ವಿಟ್ಲ: ಅಳಿಕೆ ವಾಣಿವಿಹಾರ ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಕಾರ್ಯದರ್ಶಿ ಎಸ್. ಚಂದ್ರಶೇಖರ ಭಟ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

ದೇರಳಕಟ್ಟೆ ಕೆ.ಎಸ್. ಹೆಗಡೆ ಆಸ್ಪತ್ರೆ ತೀವ್ರ ನಿಗಾ ಘಟಕ ವಿಭಾಗದ ತಜ್ಞ ಡಾ. ನರೇಶ್ ರೈ ಮಾತನಾಡಿ ಅಳಿಕೆ ವಿದ್ಯಾಸಂಸ್ಥೆಯ ವಾತಾವರಣ ಶೈಕ್ಷಣಿಕ ಚಟುವಟಿಕೆ ಹೇಳಿ ಮಾಡಿಸಿದಂತಿದೆ. 40 ವರ್ಷಗಳ ಹಿಂದೆ ಕಲಿತ ಅಳಿಕೆ ಶಿಸ್ತುಬದ್ಧ ಜೀವನ ಕ್ರಮ, ಬೆಳಗಿನ ಪ್ರಾರ್ಥನೆ, ಶುಚಿತ್ವ ಇಂದು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟದಲ್ಲಿರುವ ರೋಗಿಗಳನ್ನು ನೋಡಿಕೊಳ್ಳಲು ಧೈರ್ಯ ತುಂಬುತ್ತಿದೆ ಎಂದು ಹೇಳಿದರು.

ಆಟೋಟಗಳಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಬಹುಮನ ವಿತರಿಸಿದರು. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ೬ನೇ ತರಗತಿ ಶಿರ್ಷಿತಾ ಕಾರಂತ್ ಅವರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆಯಿತು.

ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ವಕೀಲ ಮಹೇಶ್ ಅಳಿಕೆ, ಸಮೂಹ ಸಂಪನ್ಮೂಲ ವ್ಯಕ್ತಿ ಕೆ. ಚಂದ್ರಶೇಖರ, ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಜನಾರ್ದನ ನಾಯಕ್ ಎಸ್. ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಈಶ್ವರ ನಾಯ್ಕ್ ಎಸ್. ಸ್ವಾಗತಿಸಿ, ವರದಿ ವಾಚನ ಮಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ರೈ ವಂದಿಸಿದರು. ಶಿಕ್ಷಕ ಪ್ರವೀಣ್ ಶೆಟ್ಟಿ ಕಾರ್ಯಾಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net