ಹಿಂದು ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣ; ಎಲ್ಲ ಒಂಬತ್ತು ಆರೋಪಿಗಳೂ ದೋಷಮುಕ್ತ...

Praveen Poojary
Published on

ಕೊಡಗು: ಹಿಂದು ಸಂಘಟನೆಯೊಂದರ ಕಾರ್ಯಕರ್ತನೊಬ್ಬನ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಲ್ಲರೂ ದೋಷಮುಕ್ತರಾಗಿದ್ದು, ಆ ಸಂಬಂಧಿತವಾಗಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಹಿಂದು ಸಂಘಟನೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ.

ಪ್ರವೀಣ್​ ಪೂಜಾರಿ ಹತ್ಯೆ 2016ರ ಆಗಸ್ಟ್ 14ರಂದು ಕೊಡಗು ಜಿಲ್ಲೆ ಗುಡ್ಡೆಹೊಸೂರು ಬಳಿ ನಡೆದಿತ್ತು. ಅವರು ಅಖಂಡ ಭಾರತ ಸಂಕಲ್ಪ ಯಾತ್ರೆ ಪಂಜಿನ ಮೆರವಣಿಗೆ ಮುಗಿಸಿ ಹಿಂದಿರುಗುವಾಗ ಅವರನ್ನು ಕೊಲೆ ಮಾಡಲಾಗಿತ್ತು. ಈ ಸಂಬಂಧ ಒಂಬತ್ತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಎಲ್ಲ ಒಂಬತ್ತು ಆರೋಪಿಗಳನ್ನು ದೋಷಮುಕ್ತಗೊಳಿಸಿ ಕೊಡಗು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಆರೋಪಮುಕ್ತ ಗೊಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net