ಸರ್ಕಾರಿ ಶಾಲೆಗಳಲ್ಲೂ ಸಕಲ ಸೌಕರ್ಯ

06 ylp 01 (nandolli)
Published on

 ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ನಂದೊಳ್ಳಿ’ ಹಬ್ಬ ಕಾರ್ಯಕ್ರಮ ಬುಧವಾರ ರಾತ್ರಿ ನಡೆಯಿತು.

ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳು ಎಲ್ಲ ಸೌಕರ್ಯ ಹೊಂದಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಸಂತಸದ ಸಂಗತಿ ಎಂದರು.

ಶಾಲೆಯ ನಿಕಟಪೂರ್ವ ಎಸ್​ಡಿಎಂಸಿ ಅಧ್ಯಕ್ಷರು ಹಾಗೂ ಅಡುಗೆಯವರನ್ನು ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಪಠ್ಯ ಹಾಗೂ ಪಠ್ಯೇತರವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್. ಭಟ್ಟ, ಗ್ರಾ.ಪಂ. ಅಧ್ಯಕ್ಷೆ ಭವಾನಿ ಸಿದ್ದಿ, ಉಪಾಧ್ಯಕ್ಷೆ ನಾಗರತ್ನಾ ನಾಯ್ಕ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್. ಭಟ್ಟ, ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಪಿ. ಭಟ್ಟ ಗುಂಡ್ಕಲ್, ಪಿಡಿಒ ರಾಜೇಶ ಶೇಟ್, ಎಸ್​ಡಿಎಂಸಿ ಅಧ್ಯಕ್ಷ ಚಿನ್ಮಯ ಬೆಳ್ಳಿ, ಮುಖ್ಯಾಧ್ಯಾಪಕ ಭಾಸ್ಕರ ನಾಯ್ಕ, ಶಿಕ್ಷಕ ಅಮಿತ್ ಚೌಹಾಣ ಇತರರಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕರ್ನಾಟಕ ಕಲಾ ಸನ್ನಿಧಿ ತೇಲಂಗಾರ ಹಾಗೂ ಅತಿಥಿ ಕಲಾವಿದರಿಂದ ಪ್ರದರ್ಶನಗೊಂಡ ವೀರ ವನಿತೆ ಲಕ್ಷ್ಮೀಬಾಯಿ ಯಕ್ಷಗಾನ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net