ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಿ: ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹ

All India Bahujan Samaj Party press conference Mandya
Published on

ಮಂಡ್ಯ: ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ ಜಾರಿ ಮಾಡುವಂತೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.

ಒಳ ಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಜಾರಿಗೆ ಮುಂದಾಗದೇ ಇರುವುದು ಸರಿಯಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಚ್.ಕಾಂತರಾಜು ಆಯೋಗ ರಚಿಸಿ ಜಾತಿ ಗಣತಿ ನಡೆಸಿದೆ. ಯಾವ ಜಾತಿ ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಹೀನವಾಗಿದೆ ಎಂಬುದನ್ನು ಗುರುತಿಸಿದ್ದು ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಈ ವರದಿಗಳ ಬಗ್ಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಚರ್ಚಿಸಿ ಶೋಷಿತ ಸಮುದಾಯಕ್ಕೆ ಸಮಬಾಳು, ಸಮಪಾಲು ನೀಡುವ ಗುರುತರ ಜವಾಬ್ದಾರಿ ಮೆರೆಯುವಂತೆ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ರಾಜ್ಯ ಸರ್ಕಾರವು ತಳಸಮುದಾಯಗಳ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ನಾಶ ಮಾಡಲು ಹೊರಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ಮತ್ತು ಒಳ ಮೀಸಲಾತಿ ವರದಿಯನ್ನು ಜಾರಿ ಮಾಡಬೇಕು. ಇಲ್ಲವಾದರೆ ಖುರ್ಚಿ ಕಾಲಿ ಮಾಡಬೇಕು. ಡಿ.6ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಪರಿನಿಬ್ಬಾಣ ದಿನ ನಡೆಯುವುದರ ಒಳಗಾಗಿ ವರದಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಕೆರಗೋಡು, ಉಪಾಧ್ಯಕ್ಷ ಬಿ.ಆನಂದ್, ಪುಟ್ಟಸ್ವಾಮಿ, ಮುತ್ತುರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net