ಸೊಸೈಟಿಗಳಲ್ಲಿ ಗ್ರಾಪಂ ಖಾತೆ ತೆರೆಯಲು ಅವಕಾಶ: ರಾಜೇಂದ್ರ ಕುಮಾರ್​ ಆಗ್ರಹ

udp-20-sahakara
Published on

ಉಡುಪಿ: ವಿಕಸಿತ ಭಾರತ ಸಂಕಲ್ಪ ಸಹಕಾರ ಕ್ಷೇತ್ರದಿಂದ ಪೂರ್ಣಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರ ಈ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಧಾರ್ಮಿಕ ದತ್ತಿ ಇಲಾಖೆ ಸಹಿತ ವಿವಿಧ ಇಲಾಖೆಗಳು ಮತ್ತು ಗ್ರಾಪಂ ಖಾತೆಗಳನ್ನು ಸಹಕಾರಿ ಸಂಗಳಲ್ಲಿ ತೆರೆಯಲು ಅವಕಾಶ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್​ ಅಧ್ಯಕ್ಷ ಡಾ. ಎಂ.ಎನ್​. ರಾಜೇಂದ್ರ ಕುಮಾರ್​ ಆಗ್ರಹಿಸಿದರು.

ಬುಧವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ , ಸಹಕಾರ ಇಲಾಖೆ ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ದೇಶಾದ್ಯಂತ 32 ಕೋಟಿ ಸದಸ್ಯರು ತೊಡಗಿಸಿಕೊಂಡಿದ್ದಾರೆ. ಅವಿಭಜಿತ ದಕ ಜಿಲ್ಲೆಯ ಸಹಕಾರಿ ಸಂಗಳು ದೇಶಕ್ಕೆ ಮಾದರಿಯಾಗಿವೆ. ಹೀಗಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಪಠ್ಯಪುಸ್ತಕದಲ್ಲಿ ಸಹಕಾರಿ ರಂಗದ ವಿಷಯವನ್ನು ಸೇರಿಸಬೇಕು ಎಂದು ಒತ್ತಾಯಿಸಿದರು.

ಉಡುಪಿ&ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೇಶ ಆರ್ಥಿಕಾಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರ ಪ್ರಮುಖ ಪಾತ್ರ ವಹಿಸಿದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ ವಿಕಸಿತ ಭಾರತ ಕಟ್ಟಲು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

ಶಾಸಕ ಯಶ್​ಪಾಲ್​ ಸುವರ್ಣ ಮಾತನಾಡಿ, ದೇಶದ ಆರ್ಥಿಕತೆಗೆ ಶಕ್ತಿ ನೀಡಿರುವುದು ಸಹಕಾರಿ ಕ್ಷೇತ್ರ. ಸರ್ಕಾರದ ಯೋಜನೆ ಜನರ ಮನೆಬಾಗಿಲಿಗೆ ತಲುಪಿಸುತ್ತಿದೆ. ಯುವಜನತೆ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾಲುದಾರಿಕೆ ಅಗತ್ಯ ಎಂದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ಉದ್ಯಮಿ ನಾಡೋಜ ಡಾ. ಜಿ. ಶಂಕರ್​, ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಡಿಸಿಸಿ ಬ್ಯಾಂಕ್​ ನಿರ್ದೇಶಕ ದೇವಿಪ್ರಸಾದ್​ ಶೆಟ್ಟಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್​ ಶೆಟ್ಟಿ, ಸಹಕಾರ ಸಂಗಳ ಉಪನಿಬಂಧಕಿ ಕೆ.ಆರ್​.ಲಾವಣ್ಯ, ಸಹಾಯಕ ನಿಬಂಧಕಿ ಸುಕನ್ಯಾ, ಮನೋತಜ್ಞ ಸಿ.ಆರ್​. ಚಂದ್ರಶೇಖರ್​, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶ್ರೀಧರ್​ ಪಿ.ಎಸ್​. ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net