ಪಿಪಿಸಿಯಲ್ಲಿ ಅಖಿಲ ಭಾರತ ಅಂತರ್​ ವಿವಿ ಕಬಡ್ಡಿ ಪಂದ್ಯಾಟ

udp-20-ppc
Published on

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಪೂರ್ಣಪ್ರಜ್ಞ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಅಂತರ್​ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನ. 23 ರಿಂದ 26ರವರೆಗೆ ನಡೆಯಲಿದೆ ಎಂದು ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ. ಜಿ. ಎಸ್​. ಚಂದ್ರಶೇಖರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

23 ರಂದು ಬೆಳಿಗ್ಗೆ 7 ಗಂಟೆಗೆ ಉಡುಪಿ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಭೂಮಿಪೂಜೆ ನೆರವೇರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಉದ್ಘಾಟನಾ ಸಮಾರಂಭ
ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅರ್ಜುನ್​ ಪ್ರಶಸ್ತಿ ಪುರಸ್ಕತ ಹಾಗೂ ವಿಶ್ವಕಪ್​ ಕಬಡ್ಡಿ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ವಿಜೇತ ರಾಕೇಶ್​ ಕುಮಾರ್​ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಜಯರಾಜ್​ ಅಮೀನ್​ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಶಾಸಕ ಯಶಪಾಲ್​ ಸುವರ್ಣ, ಕಾಪು ಶಾಸಕ ಸುರೇಶ್​ ಶೆಟ್ಟಿ ಗುರ್ಮೆ, ಡಾ. ಜಿ ಶಂಕರ್​ ಫ್ಯಾಮಿಲಿ ಟ್ರಸ್ಟ್​ ನ ಅಧ್ಯಕ್ಷ ಡಾ. ಜಿ ಶಂಕರ್​, ಮುನಿಯಾಲು ಉದಯ ಕೃಫ್ಣಿಯ್ಯ ಚಾರಿಟೇಬಲ್​ ಟ್ರಸ್ಟ್​ ಅಧ್ಯಕ್ಷ ಮುನಿಯಾಲ್​ ಉದಯ್​ ಕುಮಾರ್​ ಶೆಟ್ಟಿ, ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಮಂಡಳಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್​, ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿ. ಎ. ಪ್ರಶಾಂತ್​ ಹೊಳ್ಳ, ಪೂರ್ಣಪ್ರಜ್ಞ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಬಿ. ಎನ್​. ಸೋಮಯಾಜಿ, ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್​., ಉಪಸ್ಥಿತರಿರುವರು ಎಂದರು.

25 ರಂದು ಸಾಯಂಕಾಲ 6 ಗಂಟೆಗೆ ಪ್ರಜ್ಞಾ ಗೌರವ ಸಮಾರಂಭ ನಡೆಯಲಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕಾಲೇಜಿನ 13 ಮಂದಿ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಸಚಿವ ವಿನಯ್​ ಕುಮಾರ್​ ಸೊರಕೆ, ಮಾಜಿ ಶಾಸಕ ರಘುಪತಿ ಭಟ್​. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ, ಉದ್ಯಮಿ ಪ್ರಸಾದರಾಜ್​ ಕಾಂಚನ್​, ಗಿರೀಶ್​ ಶೆಟ್ಟಿ ತೆಳ್ಳಾರ್​, ಅದಮಾರು ಪೂರ್ಣಪ್ರಜ್ಞ ಪಿಯು ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ಶ್ರೀಧರ ರಾವ್​, ಉಪಸ್ಥಿತರಿರುವರು ಎಂದರು.

ಕ್ರೀಡಾಕೂಟ ಸಮಾರೋಪ
26ರಂದು ಸಾಯಂಕಾಲ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಅದಮಾರು ಮಠ ಎಜುಕೇಶನ್​ ಕೌನ್ಸಿಲ್​ ಅಧ್ಯಕ್ಷ ಶ್ರೀ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಉಪಸ್ಥಿತರಿರುವರು. ವಿಧಾನಸಭೆ ಸಭಾಪತಿ ಯು.ಟಿ. ಖಾದರ್​ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಧಾನ ಪರಿಫಿತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪಿ. ಎಸ್​. ದಿನೇಶ್​ ಕುಮಾರ್​, ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್​ ರಾಜು ಕೆ., (ಕೆಎಎಸ್​), ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ಪೂರ್ಣಪ್ರಜ್ಞ ಪಿಯು ಕಾಲೇಜಿನ ಕಾರ್ಯದರ್ಶಿ ಶ್ರೀ ಶಶಿಕಿರಣ್​ ಉಮಾಕಾಂತ್​, ಪೂರ್ಣಪ್ರಜ್ಞ ಪಿಯು ಕಾಲೇಜು ಕೋಶಾಧಿಕಾರಿ ಸಿ.ಎ ಗಣೇಶ್​ ಹೆಬ್ಬಾರ್​, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್​ ಕುಮಾರ್​ ಶೆಟ್ಟಿ, ಉದ್ಯಮಿ ದಿನೇಶ್​ ಪುತ್ರನ್​, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್​ ಉಪಸ್ಥಿತರಿರುವರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್​.ಚಂದ್ರಶೇಖರ್​ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಜೆರಾಲ್ಡ್​ ಸಂತೋಫ್​ಿ ಡಿಸೋಜ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್​ ಕುಮಾರ್​ ಸಿ.ಕೆ, ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್​., ಎಐಐಯು ಕಬಡ್ಡಿ ಪಂದ್ಯಾವಳಿಯ ಸಂಯೋಜಕ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net