ಕಿಕ್ ಬಾಕ್ಸಿಂಗ್‌ನಲ್ಲಿ ಶಾಲಿನಿಗೆ ಕಂಚು

Kickboxing
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯ ಕಂಚಿನ ಪದಕ ವಿಜೇತೆ ಎಸ್.ಶಾಲಿನಿ, ತರಬೇತುದಾರ ಎಸ್. ಜಸ್ವಂತ್ ಹಾಗೂ ವ್ಯವಸ್ಥಾಪಕಿ ಸಂಧ್ಯಾರಾಣಿ ಅವರನ್ನು ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅಭಿನಂದಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ಇದ್ದರು.
Published on

ಮೈಸೂರು: 2021-22ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಎಸ್.ಶಾಲಿನಿ ಕಂಚಿನ ಪದಕ ಪಡೆಯುವ ಮೂಲಕ ಕೀರ್ತಿ ತಂದಿದ್ದಾರೆ.
ಕ್ರೆಸ್ಟಾ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಲಿನಿ ಒಂದು ವಾರಗಳ ಕಾಲ ಜಾನಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಚಲ ವಿಶ್ವವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಈ ಸಾಧನೆ ಮಾಡಿದ್ದಾರೆ.


ಶಾಲಿನಿ, ತರಬೇತುದಾರ ಎಸ್. ಜಸ್ವಂತ್ ಹಾಗೂ ವ್ಯವಸ್ಥಾಪಕಿ ಸಂಧ್ಯಾರಾಣಿ ಅವರನ್ನು ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅಭಿನಂದಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net