ಅಖಿಲ ಭಾರತ ಅಂತರ್ ವಿವಿ ಪುರುಷರ ಖೋ-ಖೋ ಪಂದ್ಯಾಟ

IMG-20250404-WA0030
Published on

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ವತಿಯಿಂದ ಶ್ರೀ ವಿಬುಧೇಶತೀರ್ಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದಲ್ಲಿ ಏ. 9 ರಿಂದ 12ರವರೆಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ&-ಖೋ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9ರಂದು ಬೆಳಗ್ಗೆ 10.30ಕ್ಕೆ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಪಂದ್ಯಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿಶೇಷ ಅಭ್ಯಾಗತರಾಗಿರುವರು. ಮಂಗಳೂರು ವಿ.ವಿ. ಉಪಕುಲಪತಿ ಪ್ರೊ. ಪಿ.ಎಲ್.ಧರ್ಮ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಅದಮಾರು ಮಠ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಎ.ಪಿ.ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಗೌರವ ಖಜಾಂಜಿ ಸಿ.ಎ., ಪ್ರಶಾಂತ್ ಹೊಳ್ಳ, ಪ್ರಾಂಶುಪಾಲ ಡಾ. ರಾಮು ಎಲ್.. ಕರ್ಣಾಟಕ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣನ್, ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಅತಿಥಿಗಳಾಗಿರುವರು ಎಂದು ಹೇಳಿದರು.

ಸಮಾರೋಪ ಸಮಾರಂಭ

12 ರಂದು ಬೆಳಗ್ಗೆ 11.30ಕ್ಕೆ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮುಖ್ಯ ಅತಿಥಿಗಳಾಗಿರುವರು. ಮಂಗಳೂರು ವಿ.ವಿ. ಕುಲಸಚಿವ ರಾಜುಮೊಗವೀರ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ. ಕೆ. ಜಯಪ್ರಕಾಶ ಹೆಗ್ಡೆ, ಉದ್ಯಮಿ ಪ್ರಸಾದರಾಜ್ ಕಾಂಚನ್, ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಗೌರವ ಖಜಾಂಜಿ ಸಿ.ಎ., ಪ್ರಶಾಂತ್ ಹೊಳ್ಳ, ಪೂರ್ಣಪ್ರಜ್ಞ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಶ್ರೀರಮಣ ಐತಾಳ್, ಆಡಳಿತಾಧಿಕಾರಿ ಡಾ. ಶ್ರೀಧರ್ ರಾವ್, ಗೌರವ ಖಜಾಂಜಿ ಸಿ.ಎ.. ಗಣೇಶ್ ಹೆಬ್ಬಾರ್, ಪ್ರಾಂಶುಪಾಲ ಡಾ.ರಾಮು ಎಲ್. ಉಪಸ್ಥಿತರಿರುವರು. ಅದಮಾರು ಮಠ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಎ.ಪಿ. ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಕಾಲೇಜಿನ ಪ್ರಾಂಶುಪಾಲ ಡಾ. ರಾಮು ಎಲ್., ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಉಪಸ್ಥಿತರಿದ್ದರು.

16 ತಂಡಗಳಿಂದ 300 ವಿದ್ಯಾರ್ಥಿಗಳು ಭಾಗಿ

ರಾಷ್ಟ್ರೀಯ ಪಂದ್ಯಾಕೂಟವು "ಜರ್ಮನ್ ಹ್ಯಾಂಗರ್' ತಂತ್ರಜ್ಞಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶ್ರೀ ವಿಬುಧೇಶತೀರ್ಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಯ್ದ 16 ತಂಡಗಳ 300 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದಕ್ಷಿಣವಲಯದಿಂದ ಮಂಗಳೂರು ವಿ.ವಿ., ದಾವಣಗೆರೆ ವಿ.ವಿ.. ತಮಿಳುನಾಡಿನ ಭಾರತಿಯಾರ್ ವಿ.ವಿ. ಕೊಯಮುತ್ತೂರು, ಕೇರಳ ವಿ.ವಿ. ತಿರುವನಂತಪುರ, ಪಶ್ಚಿಮ ವಲಯದಿಂದ ಎಸ್.ಆರ್.ಟಿ.ಎಂ. ಯು ನಾಂದೆಡ್ ಮಹಾರಾಷ್ಟ್ರ, ಬಿ.ಎ.ಎಂ.ಯು. ಸಂಭಾಜಿನಗರ ಮಹಾರಾಷ್ಟ್ರ, ಮುಂಬಯಿ ವಿ.ವಿ. ಹಾಗೂ ಸಾವಿತ್ರಿ ಬಾಯಿ ಪುಲೆ ವಿ.ವಿ. ಪುಣೆ, ಉತ್ತರ ವಲಯದ ಸಿ.ಎಸ್.ಜೆ.ಎಂ.ಯು. ಕಾನ್ಸುರ, ಎಲ್.ಪಿ.ಯು. ಜಲಂದರ್, ದೆಹಲಿ ವಿ.ವಿ., ಜಿ.ಎನ್.ಡಿ.ಯು. ಅಮೃತಸರ, ಪೂರ್ವ ವಲಯದ ನಾಲ್ಕು ತಂಡಗಳಲ್ಲಿ ಕೆ.ಐ.ಐ.ಟಿ ಭುವನೇಶ್ವರ, ಛತ್ತೀಸ್ಗಢದ ಹೇಮಚಂದಯಾದವ ವಿ.ವಿ. ಹಾಗೂ ಪಂಡಿತ್ ರವಿಶಂಕರ ಶುಕ್ಲ ವಿ.ವಿ., ಗಂಗಾಧರ ಮೆಹರ್ ವಿ.ವಿ. ಒಡಿಸ್ಸಾ ತಂಡಗಳು ಆಗಮಿಸಲಿವೆ. ಅಧಿಕಾರಿಗಳು, ಆಟಗಾರರು, ತಂಡದ ನಿರ್ವಾಹಕರು ಮತ್ತು ತರಬೇತಿದಾರರಿಗಾಗಿ ಉಚಿತ ವಸತಿ, ಸೌತ ಇಂಡಿಯನ್ ಮತ್ತು ನಾರ್ತ್ ಇಂಡಿಯನ್ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net