24 ರಿಂದ ಉಡುಪಿಯಲ್ಲಿ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

udp-14-puttige sri
Published on

ಉಡುಪಿ: ಬೆಂಗಳೂರಿನ ಭಾರತೀಯ ವಿದ್ವತ್​ ಪರಿಷತ್ತು, ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅ.24 ರಿಂದ 26ರವರೆಗೆ ಉಡುಪಿ ಕೃಷ್ಣ ಮಠದಲ್ಲಿ ಐತಿಹಾಸಿಕ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ ಆಯೋಜಿಸಲಾಗಿದೆ. ದೇಶ-&ವಿದೇಶಗಳ ಸುಮಾರು 2000ಕ್ಕೂ ಅಧಿಕ ವಿದ್ವಾಂಸರು ಸಮ್ಮೇಳನದಲ್ಲಿ ವಿದ್ವತ್ತೂರ್ಣ ಪ್ರಬಂಧಗಳನ್ನು ಮಂಡಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತಿರ್ಥ ಸ್ವಾಮೀಜಿ ತಿಳಿಸಿದರು.

ಗೀತಾಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತಿರ್ಥ ಶ್ರೀಪಾದರು, ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು. ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶ ಶ್ರೀವಿದ್ಯಾಪ್ರಸನ್ನತಿರ್ಥ ಶ್ರೀಪಾದರು, ಹರಿದ್ವಾರದ ಪತಂಜಲಿ ಯೋಗಪೀಠ ಟ್ರಸ್ಟ್​ನ ಸ್ವಾಮಿ ಬಾಬಾ ರಾಮದೇವ್​ ಜೀ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳಿಗೆ ಆಹ್ವಾನ ನೀಡಲಾಗಿದ್ದು, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಪಾಲರು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀೆ ಇದೆ ಎಂದರು.
ದೇಶದ ವಿವಿಧ ವಿಶ್ವವಿದ್ಯಾಲಯಗಳ ಸುಮಾರು 18ಕ್ಕೂ ಹೆಚ್ಚಿನ ಕುಲಪತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ದೀಪಾವಳಿ ಸಂದರ್ಭದಲ್ಲಿ ಕೃಷ್ಣನ ಸನ್ನಿಧಿಯಲ್ಲಿ ಜ್ಞಾನ ದೀಪೋತ್ಸವ ನಡೆಯಲಿದೆ ಎಂದರು.

ಆಲ್​ ಇಂಡಿಯಾ ಓರಿಯಂಟಲ್​ ಕಾನ್ಫರೆನ್ಸ್​ ಕಾರ್ಯದರ್ಶಿ ಡಾ. ಶಿವಾನಿ ವಿ. ಮಾತನಾಡಿ, 1919ರಲ್ಲಿ ಹಿಮಾಚಲಪ್ರದೇಶದ ಶಿಮ್ಲಾ ನಗರದಲ್ಲಿ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಭಾರತೀಯ ಭಾಷೆಗಳು ಹಾಗೂ ಸಾಹಿತ್ಯದ ಅಭಿವೃದ್ಧಿಗೆ ಅಪಾರ ಸೇವೆಯನ್ನು ಸಲ್ಲಿಸುತ್ತಿದೆ. ಪ್ರತಿ 2 ವರ್ಷಕ್ಕೊಮ್ಮೆ ದೇಶದ ವಿವಿಧ ಭಾಗಗಳಲ್ಲಿ ಈಗಾಗಲೇ 50 ಸಮಾವೇಶಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದರು.

ಅಷ್ಟಮಠಗಳ ಆವರಣ, ಸಂಸತ ಕಾಲೇಜು ಮುಂತಾದ ಸ್ಥಳಗಳಲ್ಲಿ ಏಕಕಾಲದಲ್ಲಿ ಶಿಕ್ಷಣ, ಬಾಲಸಾಹಿತ್ಯ, ಕನ್ನಡ, ಸಂಸತ, ಪಾಲಿ, ಉರ್ದು, ಯೋಗ, ಆಯುರ್ವೇದ ಮುಂತಾಗಿ ಒಟ್ಟು 23 ವಿಷಯಗಳಲ್ಲಿ ಪ್ರತ್ಯೇಕ ವಿಚಾರಸಂಕಿರಣಗಳು ನಡೆಯಲಿವೆ. ಭಗವದ್ಗೀತೆಯ ವಿಷಯದಲ್ಲಿ ಹಿರಿಯ ವಿದ್ವಾಂಸರಿಂದ ಗೋಷ್ಠಿಗಳು ಜರಗಲಿದೆ. ತರುಣರ ಕವಿಗೋಷ್ಠಿ, ಯುವ ವಿದ್ವಾಂಸ-ರು ಮತ್ತು ವಿದುಷಿಯರಿಂದ ವಾಕ್ಯಾರ್ಥ ಗೋಷ್ಠಿಗಳು, ಹಿರಿಯ ಪ್ರಸಿದ್ಧ ವಿದ್ವಾಂಸರಿಂದ ಶಾಸ್ತ್ರ್ರಾರ್ಥ ಸಭೆಗಳು ನಡೆಯಲಿವೆ. ಪತಂಜಲಿ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ನೇತೃತ್ವದಲ್ಲಿ ಮೂರು ದಿನಗಳ ಕಾಲ ಮುಂಜಾನೆ 6ರಿಂದ 7ರ ವರೆಗೆ ಯೋಗ-&ಧ್ಯಾನಾದಿ ತರಗತಿಗಳೂ ನಡೆಯಲಿವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರಿನಿವಾಸ ವರಖೇಡಿ, ಕರ್ನಾಟಕ ಸಂಸತ ವಿವಿ ಡೀನ್​ ಡಾ. ವೀರನಾರಾಯಣ ಪಾಂಡುರಂಗಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ದಿವಾನ್​ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಎಐಒಸಿ ಕಾರ್ಯದರ್ಶಿ ಡಾ. ಶ್ರುತಿ ರಾವ್​, ವಿದ್ವಾಂಸರಾದ ಭಾಸ್ಕರ ಜೋಶಿ, ವೇದೇಶ ಆಚಾರ್ಯ, ಷಣ್ಮುಖ ಹೆಬ್ಬಾರ್​ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net