

ಯಳಂದೂರು: ಸ್ವಚ್ಛ ಪಟ್ಟಣ ರೂಪಿಸುವ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಪ್ರತಿಯೊಬ್ಬರೂ ಕೈ ಜೋಡಿಸಿ ಕಸವನ್ನು ಎಲ್ಲೆಂದರಲ್ಲಿ ಹಾಕದೆ ಕಸದ ವಾಹನಕ್ಕೆ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಕಾರಿ ಮಹೇಶ್‌ಕುಮಾರ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಪ್ರಯುಕ್ತ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಹಾಗೂ ರಾಜ್ಯ ಸರ್ಕಾರವು 15 ದಿನಗಳ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುವುದು. ನಂತರ ಶಾಲಾ-ಕಾಲೇಜು ಹಾಗೂ ಪ್ರತಿ ವಾರ್ಡ್ ಗಳಲ್ಲಿ ಕಸ, ಚರಂಡಿ, ಕುಡಿಯುವ ನೀರು, ಸೇರಿದಂತೆ ಪರಿಸರ ಬಗ್ಗೆ ಸ್ಚಚ್ಛತೆ ಬಗ್ಗೆ ತಿಳಿಸಲಾಗುವುದು. ಇದನ್ನು ಸಾರ್ವಜನಿಕರು ಪ್ರತಿನಿತ್ಯ ಜೀವನದಲ್ಲಿ ಸುತ್ತಮುತ್ತಲಿನ ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಪಟ್ಟಣದ ಸ್ವಚ್ಛತಾ ಕಾರ್ಯ ಪೌರಕಾರ್ಮಿಕ ವರ್ಗಕ್ಕೆ ಸಿಮೀತಗೊಳಸದೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕರೆ ನೀಡಿದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ತಾಲೂಕು ಕಚೇರಿ ಮುಂಭಾಗದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಹಸೀಲ್ದಾರ್ ಜಯಪ್ರಕಾಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಮಹೇಶ್, ರಂಗನಾಥ್, ಮಂಜು, ಸುಶೀಲಾ, ಸಿಬ್ಬಂದಿ ಮಲ್ಲಿಕಾರ್ಜುನ ಸೇರಿದಂತೆ ಇತರರು ಹಾಜರಿದ್ದರು.