ಬಿಜೆಪಿ ಎಲ್ಲ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು

BC Patil
BC Patil
Published on

ಬೆಂಗಳೂರು: ಪಕ್ಷದ ಎಲ್ಲ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು. ಯಾರನ್ನು ಮಂತ್ರಿ ಮಾಡಬೇಕು ಎನ್ನುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ವಿವೇಚನೆಗೆ ಬಿಟ್ಟದ್ದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ವಿಕಾಸ ಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹವರಿಗೆ ಸಚಿವ ಸ್ಥಾನ ಕೊಡಿ ಎಂದು ಹೇಳುವಷ್ಟು ದೊಡ್ಡವನು ನಾನಲ್ಲವೆಂದರು.

ಡಿಕೆಶಿ ನಿಲುವು ತಪ್ಪು
ಡಿ.ಜೆ.ಹಳ್ಳಿ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವುದು ಸ್ಪಷ್ಟವಾಗಿದೆ. ನೊಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನೆರವಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬರಬೇಕಾಗಿತ್ತು. ಮುಸ್ಲಿಮರು ವಿರೋಧ ಕಟ್ಡಿಕೊಳ್ಖಬೇಕಾಗುತ್ತದೆ ಎಂದು ಹಿಂಜರಿದು ತಪ್ಪು ಮಾಡಿದ್ದಾರೆ ಎಂದು ಬಿ.ಸಿ.ಪಾಟೀಲ್ ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net