ನಿಯಮ ಪಾಲನೆಯಿಂದ ಎಲ್ಲ ಸಂಚಾರಿಗಳು ಸುರಕ್ಷಿತ

3 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಸ್ತೆ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವುದರಿಂದ ಎಲ್ಲ ಸಂಚಾರಿಗಳು ಸುರಕ್ಷಿತವಾಗಿರುತ್ತಾರೆ. 2024ರ ಜನವರಿಯಿಂದ ನವೆಂಬರವರೆಗೆ ಅವಳಿನಗರದಲ್ಲಿ 118 ವಾಹನ ಅಪಘಾತ ಪ್ರಕರಣಗಳಾಗಿದ್ದು, 126 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷೆ ದಿವ್ಯ ಪ್ರಭು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ವಾಹನಗಳ ಮೂಲಕ ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಸ್ತೆ ಜನರಿಗೆ ಸೇರಿದ್ದು, ಸ್ವೇಚ್ಛಾಚಾರಿಗಳಾಗಿ ತಮಗೆ ತಿಳಿದಂತೆ ರಸ್ತೆಗಳಲ್ಲಿ ವಾಹನ ಓಡಿಸಬಾರದು. ಇದರಿಂದ ಸವಾರನ ಜತೆಗೆ ಸಂಚರಿಸುವವರಿಗೆ ಮತ್ತು ಸಹ ಪ್ರಯಾಣಿಕರ ಪ್ರಾಣಕ್ಕೂ ತೊಂದರೆ ಆಗುತ್ತದೆ. ರಸ್ತೆ ಸಂಚಾರ ನಿಯಮಗಳನ್ನು ಗೌರವಿಸಿ, ಪ್ರತಿಯೊಬ್ಬರು ಪಾಲಿಸಬೇಕು ಎಂದರು.

ಸಾರಿಗೆ ಇಲಾಖೆ ಅಪರ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ, ಉಪ ಪೊಲೀಸ್​ ಆಯುಕ್ತ ರವೀಶ ಸಿ.ಆರ್​. ಮಾತನಾಡಿದರು. ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಾರಿಗೆ ಇಲಾಖೆ ಅಧಿಕಾರಿಗಳು, ಇತರರು ಇದ್ದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಸ್ವಾಗತಿಸಿದರು. ಜಿ.ವಿ.ದಿನಮನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net