ಪ್ರವಾಹ :ಅಧಿಕಾರಿ-ಸಿಬ್ಬಂದಿ ಕೇಂದ್ರಸ್ಥಾನದಲ್ಲಿರುವಂತೆ ಡಿಸಿ ಫೌಜಿಯಾ ತರನ್ನುಮ್ ಸೂಚನೆ

B Fouziya Tarannum
Published on
ಕಲಬುರಗಿ :  ಮಹಾರಾಷ್ಟ್ರ ರಾಜ್ಯದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹಡಿಬಿಡಲಾಗುತ್ತಿರುವುದರಿಂದ ಜಿಲ್ಲೆಯ  ಅಫಜಲಪೂರ, ಕಲಬುರಗಿ, ಶಹಾಬಾದ, ಜೇವರ್ಗಿ ಹಾಗೂ ಚಿತ್ತಾಪೂರ ತಾಲ್ಲೂಕುಗಳ ಒಟ್ಟು 105 ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.
ಮಹಾರಾಷ್ಟ್ರದಿಂದ 1.35 ಲಕ್ಷ ಕ್ಯುಸೆಕ್ ನೀರು ಹರಿಬಿಟಿದ್ದರಿಂದ ನೀರಅಫಜಲಪೂರ ತಾಲ್ಲೂಕಿನ ಸೊನ್ನ ಬ್ಯಾರೇಜ್‌ಗೆ ತಲುಪಿ ಅಲ್ಲಿಂದ 1.84 ಲಕ್ಷ ಕ್ಯುಸೆಕ್ ನೀರು ಭೀಮಾ ನದಿಗೆ ಹೊರ ಬಿಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಪ್ರವಾಹ ಮತ್ತು ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಕೇಂದ್ರ ಸ್ಥಾನದಲ್ಲಿದ್ದು ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net