

ರಾಯಚೂರು: ಈಶಾನ್ಯ ಪದವೀಧರ ಮತ ಕ್ಷೇತ್ರಕ್ಕೆ ಜೂ.3ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ 30 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ 13,581 ಪುರುಷ, 6,731 ಮಹಿಳೆಯರು, ಐವರು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 20,317 ಮತದಾರರಿದ್ದಾರೆ ಎಂದರು.
ಈಗಾಗಲೇ ಮುಖ್ಯ ಚುನಾವಣಾಕಾರಿ ಕಚೇರಿಯಿಂದ ಮತದಾರರ ಮೊಬೈಲ್‌ಗೆ ವಿವರವನ್ನು ಸಂದೇಶ ಕಳುಹಿಸಲಾಗಿದೆ. ಮತದಾರರ ಮಾಹಿತಿ ಚೀಟಿಯಲ್ಲಿರುವ ಕ್ಯೂಆರ್ ಕೋಡ್ ಮೂಲಕ ಮತಗಟ್ಟೆಯನ್ನು ತಲುಪಬಹುದಾಗಿದೆ. ಮತದಾರರಿಗೆ ವಿಶೇಷ ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಆರ್.ಶಿವಕುಮಾರ, ಅಪರ ಜಿಲ್ಲಾಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.