ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ

oppo_2
ಮದ್ದೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಮಾತನಾಡಿದರು. ಮೀನಾಕ್ಷಿ, ಸಿ.ಎಚ್.ಕಾಳೀರಯ್ಯ, ಸೋಮಶೇಖರ್ ಇದ್ದರು.
Published on

ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಅಂದು ಬೆಳಗ್ಗೆ 8 ಗಂಟೆಗೆ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದ ಆವರಣದಿಂದ ವಿದ್ಯಾರ್ಥಿಗಳು ಪಂಥ ಸಂಚಲನದ ಮೂಲಕ 9 ಗಂಟೆಗೆ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಯ್ಕೆ ಮಾಡಲು ಸನ್ಮಾನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕನ್ನಡ ಪರ ಹೋರಾಟಗಾರ ಮ.ನ.ಪ್ರಸನ್ನಕುಮಾರ್, ಸದಸ್ಯ ಕಾರ್ಯದರ್ಶಿಯಾಗಿ ಬಿಇಒ ಸಿ.ಎಚ್.ಕಾಳೀರಯ್ಯ, ಸದಸ್ಯರಾಗಿ ತರೀಕೆರೆ ರಮಾನಂದ, ಆತಗೂರು ನಿಂಗಯ್ಯ, ತೈಲೂರು ಆನಂದಾಚಾರಿ ಅವರನ್ನು ಆಯ್ಕೆ ಮಾಡಲಾಯಿತು.

ಬಿಇಒ ಸಿ.ಎಚ್.ಕಾಳೀರಯ್ಯ, ಪುರಸಭಾ ಮುಖ್ಯಾಧಿಕಾರಿ ಮೀನಾಕ್ಷಿ, ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್, ಸಂಘ, ಸಂಸ್ಥೆಗಳ ಮುಖಂಡರಾದ ವಿ.ಸಿ.ಉಮಾಶಂಕರ್, ತಿಪ್ಪೂರು ರಾಜೇಶ್, ನ.ಲಿ.ಕೃಷ್ಣ, ಮಹದೇವು, ಲಕ್ಷ್ಮಣ್ ಚನ್ನಸಂದ್ರ, ವೆಂಕಟಚಲಯ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net