ಮಲೈ ಮಹದೇಶ್ವರ ಬೆಟ್ಟದಲ್ಲಿನ ನಿರ್ಬಂಧಗಳ ತೆರವು, ರಾತ್ರಿ ವಾಸ್ತವ್ಯಕ್ಕೂ ಅವಕಾಶ...

Madeshwara
Published on

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಗೆ ವಿಧಿಸಲಾಗಿದ್ದ ಎಲ್ಲ ನಿರ್ಬಂಧಗಳನ್ನು ಹಿಂದೆಗೆದುಕೊಳ್ಳಲಾಗಿದ್ದು ಕ್ಷೇತ್ರದಲ್ಲಿ ಭಕ್ತರಿಗೆ ರಾತ್ರಿ ವಾಸ್ತವ್ಯ, ರಥೋತ್ಸವಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದ ನಾಗ ಮಲೆಭವನದಲ್ಲಿಂದು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಮಲೈ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಸಂದರ್ಭಕ್ಕಾಗಿ ವಿಧಿಸಲಾಗಿದ್ದ ನಿರ್ಬಂಧ ಹಿಂಪಡೆದಿರುವ ಕಾರಣ ಭಕ್ತರಿಗೆ ಯಾವುದೇ ತೊಂದರೆ ಇಲ್ಲ. ಭಕ್ತರು ಕ್ಷೇತ್ರಕ್ಕೆ ಆಗಮಿಸಬಹುದು. ರಾತ್ರಿ ವಾಸ್ತವ್ಯವನ್ನೂ ಹೂಡಬಹುದು. ಶಿವರಾತ್ರಿ ರಥೋತ್ಸವದಲ್ಲೂ ಪಾಲ್ಗೊಳ್ಳಬಹುದು ಎಂದು ಸಚಿವರು ತಿಳಿಸಿದರು. ಈ ಹಿಂದೆ ಫೆ. 27ರಿಂದ ಮಾ. 3ರವರೆಗೆ ದೇವಸ್ಥಾನದಲ್ಲಿ ರಾತ್ರಿ ತಂಗುವಿಕೆಯನ್ನು ಪೂರ್ಣವಾಗಿ ನಿಷೇಧಿಸಿರುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net