ಶಿಕ್ಷಣದಿಂದ ಸರ್ವತೋಮುಖ ಬೆಳವಣಿಗೆ

ಸೋಮವಾರಪೇಟೆ ತಾಲೂಕಿನ ತೋಳೂರುಶೆಟ್ಟಳ್ಳಿ ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದ ಶಾಂತಳ್ಳಿ, ಗೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮವನ್ನು ತೋಳೂರುಶೆಟ್ಟಳ್ಳಿ ಗ್ರಾಪಂ ಅಧ್ಯಕ್ಷೆ ಭವಾನಿ ಉದ್ಘಾಟಿಸಿದರು. ಚಂದ್ರ ಶೇಖರರೆಡ್ಡಿ, ಆರತಿ, ಶಬರಿ ಗಿರೀಶ್, ಪ್ರೇಮಾ ಇತರರಿದ್ದರು.

Published on

ಸೋಮವಾರಪೇಟೆ: ಶಿಕ್ಷಣದಿಂದ ಮಾತ್ರ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಮಂಜುನಾಥ್ ಅಭಿಪ್ರಾಯಪಟ್ಟರು.

ತೋಳೂರುಶೆಟ್ಟಳ್ಳಿ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಂತಳ್ಳಿ, ಗೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರೌಢಶಾಲೆ ವಿಭಾಗದ ಕಲೋತ್ಸವ ಮತ್ತು ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಇಂತಹ ಕಾರ್ಯಕ್ರಮ ಅತಿ ಮುಖ್ಯವಾಗಿದೆ. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಲು ಪಾಲಕರು ಹೆಚ್ಚಿನ ಪ್ರೋತ್ಸಾಹ ನೀಡಿಬೇಕು ಎಂದು ಹೇಳಿದರು.

ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲೆಗಳ ಸಂಘದ ಉಪಾಧ್ಯಕ್ಷೆ ಎಲ್.ಎಂ.ಪ್ರೇಮಾ, ಶಾಲೆ ಪ್ರಾಂಶುಪಾಲ ಚಂದ್ರಶೇಖರ ರೆಡ್ಡಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ಸಮಾಜ ವಿಜ್ಞಾನ ಶಿಕ್ಷಕ ಶಬರಿಗಿರೀಶ್, ಶಿಕ್ಷಕಿಯರಾದ ಪೂಜಾ, ಶಭಾನ, ಗ್ರಾಪಂ ಉಪಾಧ್ಯಕ್ಷೆ ಆರತಿ, ಕ್ಲಸ್ಟರ್ ಪ್ರಮುಖರಾದ ಚೈತ್ರಾ, ದೇವರಾಜೇಗೌಡ ಇದ್ದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net