ಕುಕ್ಕೆಯಲ್ಲಿ ಆ.30ರ ತನಕ ಸೇವೆಗಳು ಸ್ಥಗಿತ

kukke
Published on

ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು, ಅನ್ನಸಂತರ್ಪಣೆ ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ. ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ಸಾಯಂಕಾಲ 7 ತನಕ ಭಕ್ತರು ದೇವರ ದರ್ಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂದು ದೇವಳದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net