ಎಲ್ಲ ಮತದಾರರು ಮತದಾನ ಮಾಡಿ

11
Published on

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗಬಾರದು ಎಂದರು.

ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ದವಾಗಿದ್ದು, ಇವಿಎಂಗಳನ್ನು ಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂ ಗೆ ಕಳುಹಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಜಿಲ್ಲೆಯಾದ್ಯಂತ 2,915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಪ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net