ಭಕ್ತಿ-ವೈರಾಗ್ಯವನ್ನು ಬೋಧಿಸಿದ ಅಲ್ಲಮಪ್ರಭು

mysore
Published on

ಮೈಸೂರು: ಅಲ್ಲಮಪ್ರಭು ಆಧ್ಯಾತ್ಮಿಕ ಲೋಕದ ಚಿಂತಕ ಎಂದು ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಮ.ಗು.ಸದಾನಂದಯ್ಯ ಹೇಳಿದರು.


ಕನ್ನಡ ಸಾಹಿತ್ಯ ಕಲಾಕೂಟದ ವತಿಯಿಂದ ಮೈಸೂರು ಆರ್ಟ್ ಗ್ಯಾಲರಿಯಲ್ಲಿ ಭಾನುವಾರ ಆಯೋಜಿಸಿದ್ದ ಅಲ್ಲಮಪ್ರಭು ಜಯಂತಿ ಕಾರ್ಯಕ್ರಮದಲ್ಲಿ ವಾತನಾಡಿದರು.


ಅಲ್ಲಮಪ್ರಭು 12ನೇ ಶತಮಾನದ ವಚನಕಾರರಲ್ಲಿ ಪ್ರಸಿದ್ಧರಾದವರು. ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಶೋಧಿಸಲೆತ್ನಿಸಿದರು ಎಂದರು.


ಶಿವಶರಣರಲ್ಲಿ ಅಲ್ಲಮಪ್ರಭು ಪ್ರಮುಖರು. ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವ ಮಂಟಪದ ಶೂನ್ಯ ಸಿಂಹಾಸನದ ಅಧ್ಯಕ್ಷರಾಗಿದ್ದರು. ಬಸವಣ್ಣನವರ ಸಮಕಾಲೀನನಾದ ಇವರು, ತಮ್ಮ ವಚನಗಳಲ್ಲಿ ಗಹನವಾದ ಅಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ ಎಂದರು.


ಅಲ್ಲಮನ ಆಧ್ಯಾತ್ಮಿಕ ಅನುಭವಗಳ ಅಸಾಮಾನ್ಯತೆಯಿಂದ ಅವರ ವಚನಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವರು ಬಹುಮಟ್ಟಿಗೆ ರೂಪಕ ಭಾಷೆ. ಈ ಭಾಷೆ ಅವರ ವೈಶಿಷ್ಟ್ಯವೂ ಹೌದು ಎಂದರು. ಹಿರಿಯ ಕಲಾವಿದ ಎಲ್.ಶಿವಲಿಂಗಪ್ಪ ಅವರ ಕುಂಚದಲ್ಲಿ ಅರಳಿದ ಅಲ್ಲಮಪ್ರಭು ಕಲಾಕೃತಿಯನ್ನು ಬಿಡುಗಡೆಗೊಳಿಸಲಾಯಿತು.


ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಶಾರದಾ ಶಿವಲಿಂಗಸ್ವಾಮಿ ವಾತನಾಡಿದರು. ಎಲ್.ಶಿವಲಿಂಗಪ್ಪ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹೆಳವರಹುಂಡಿ ಸಿದ್ದಪ್ಪ, ಸಮಾಜ ಸೇವಕ ಡಾ.ರಘುರಾಮ್ ವಾಜಪೇಯಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net