ಹರಿಪ್ರಸಾದ್ ಆರೋಪ ಸುಳ್ಳು: ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ

jagadeesh
Published on

ಉಡುಪಿ: ಮತದಾರರ ಪಟ್ಟಿಯಲ್ಲಿ ಲೋಪಕ್ಕೆ ಜಿಲ್ಲಾಡಳಿತವೂ ಹೊಣೆ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪವನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಅಲ್ಲಗಳೆದರು. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಚುನಾವಣಾ ಆಯೋಗ ಸ್ವತಂತ್ರವಾಗಿ ಮತದಾರರ ಪಟ್ಟಿ ತಯಾರಿಸಿ ಜಿಲ್ಲಾಡಳಿತಕ್ಕೆ ಕಳುಹಿಸಿಕೊಡುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಮಾಡಲು ಜಿಲ್ಲಾಡಳಿತಕ್ಕೆ ಅವಕಾಶವಿಲ್ಲ. ಒಂದೇ ಕುಟುಂಬದವರು ಬೇರೆ ಬೇರೆ ಸೀರಿಯಲ್ ಸಂಖ್ಯೆಯ ಗುರುತಿನ ಚೀಟಿ ಹೊಂದಿದ್ದರೆ 8ಎ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net