ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್ ಆರೋಪ

4 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರ ವಕ್ಫ್ ಮಂಡಳಿಯ ಮೂಲಕ ರೈತರ ಜಮೀನು ಕಬಳಿಸಿ ಗೂಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸರ್ಕಾರ ಜನರನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದೆ. ರಾಜ್ಯದಲ್ಲಿ ಬಯಲಿಗೆ ಬಂದಿರುವ ವಕ್ಫ್ ಕೃತ್ಯಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಕಾರಣ. ಕೇಂದ್ರ ಸರ್ಕಾರ ದೇಶದ ಜನರ ಹಿತದೃಷ್ಟಿಯಿಂದ ವಕ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮ ತಡೆಗಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ. ಇದು ಜಾರಿಯಾಗುವುದು ಖಚಿತವಾಗುತ್ತಿದ್ದಂತೆ ವಕ್ ತನ್ನ ಕರಾಳ ಕೈಚಳಕ ತೋರುವ ಮೂಲಕ ದೇಶಾದ್ಯಂತ ಸಾರ್ವಜನಿಕರ ಆಸ್ತಿಯನ್ನು ಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ. ಸಿಎಂ ಸಿದ್ದರಾಮಯ್ಯ ಅವರು ಅಽಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸದಂತೆ ತಾತ್ಕಾಲಿಕ ತಡೆ ನೀಡಿರುವುದು ಚುನಾವಣಾ ತಂತ್ರಗಾರಿಕೆಯಾಗಿದೆ. ಸಚಿವ ಜಮೀರ್ ಅಹ್ಮದ್ ಕೂಡಲೇ ರಾಜೀನಾಮೆ ನೀಡಬೇಕು. ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶ ಹೊರಡಿಸಬೇಕು. ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಕೇಂದ್ರ ಸರ್ಕಾರ ತರುತ್ತಿರುವ ವಕ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರ ಮುಂದಿನ ಅಽವೇಶನದಲ್ಲಿ ಒಮ್ಮತದಿಂದ ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ಮುಖಂಡರಾದ ಈರೇಶ ಅಂಚಟಗೇರಿ, ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ, ಸವಿತಾ ಅಮರಶೆಟ್ಟಿ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ರಾಜಣ್ಣ ಕೊರವಿ, ಶ್ರೀನಿವಾಸ ಕೋಟ್ಯಾನ್, ಮಹೇಂದ್ರ ಕೌತಾಳ್, ಸಂಜಯ ಕಪಟಕರ, ಮೋಹನ ರಾಮದುರ್ಗ, ಸಂಗನಗೌಡ ರಾಮನಗೌಡರ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net