ಮೈಸೂರು ಏರ್‌ಪೋರ್ಟ್ ಅಭಿವೃದ್ಧಿ ಕಡೆಗಣನೆ ಆರೋಪ

Published on

ಮೈಸೂರು: ರಾಜಕೀಯ ಕಾರಣದಿಂದ ನಗರದ ಮಂಡಕಳ್ಳಿ ವಿಮಾನ ನಿಲ್ದಾಣದ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಆರೋಪಿಸಿದರು.
ರಾಜ್ಯಕ್ಕೆ ಸಾಕಷ್ಟು ಬಾರಿ ಭೇಟಿ ನೀಡಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಈಗ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ನಗರದ ನಿಲ್ದಾಣದಿಂದ ನಿತ್ಯವೂ ವಿಮಾನಗಳ ಸಂಚಾರವಿದ್ದ ನಿಲ್ದಾಣವನ್ನು ಸಂಪೂರ್ಣ ಸೊರಗುವಂತೆ ಮಾಡಿದ್ದಾರೆ. ಅಭಿವೃದ್ಧಿ ಮಾಡುತ್ತೇವೆ, ಭೂಮಿ ಸ್ವಾಧೀನಪಡಿಸುವ ಅಗತ್ಯವಿದೆ ಎನ್ನುತ್ತಾ ಸುತ್ತಮುತ್ತಲಿನ ರೈತರ ಜಮೀನು ಮಾರಾಟಕ್ಕೂ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡ ಕಡಕೊಳ ಶಿವಲಿಂಗ, ಕೆಪಿಸಿಸಿ ಎಸ್‌ಸಿ ಘಟಕದ ಕಾರ್ಯದರ್ಶಿ ವಿಜಯಕುಮಾರ್, ಸದಸ್ಯ ಸೋಮಶೇಖರ್, ಕಿಸಾನ್ ಸೆಲ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net