

ಮೈಸೂರು: ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದನ್ನು ಯಾರಿಂದಲ್ಲೂ ತಪ್ಪಿಸಲು ಸಾಧ್ಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ಬೂತ್ ನಂ. 232 ಮತ್ತು 233ರಲ್ಲಿ ಭಾನುವಾರ ಭಾರತೀಯ ಜನತಾ ಪಾರ್ಟಿಯ ಮಹಾಸಂಪರ್ಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ಜನ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಆಗಬೇಕು ಎಂದು ಬಯಸುತ್ತಿದ್ದಾರೆ. ದೇಶದ ರಕ್ಷಣೆ ಮತ್ತು ಅಭಿವೃದ್ಧಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಜನರಿಗೆ ಗೊತ್ತಿದೆ. ದೇಶದಲ್ಲಿ ಕಾಂಗ್ರೆಸ್ ಆಟ ಏನೂ ನಡೆಯಲ್ಲ ಎಂದರು.
ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಚ್ಚು ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದರು.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ನಗರ ಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್, ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ, ಮೈಸೂರ ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ್, ಮುಖಂಡರಾದ ಆರ್.ಪರಮೇಶ್, ಮೈಕಾ ಪ್ರೇಮ್ ಕುಮಾರ್, ರಾಜೇಂದ್ರ, ವಿಜ್ಞೇಶ್ವರ ಭಟ್, ಶ್ರೀನಿವಾಸ್, ಸುದರ್ಶನ್, ಸುರೇಂದ್ರ, ಚರಣ್, ಕಿರಣ್ ಇತರರಿದ್ದರು.