ಮೇಲ್ಮನೆ ಫೈಟ್‌ನಲ್ಲಿ ಮೈತ್ರಿಗೆ ಗೆಲುವು

madhukumar
ಮಧುಕುಮಾರ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ
Published on

ಶಿವಮೊಗ್ಗ: ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಇಬ್ಬರು ಅಭ್ಯರ್ಥಿಗಳ ಗೆಲುವು ಖಚಿತ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಮಧುಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್.ಎಲ್.ಬೋಜೇಗೌಡ, ಪದವೀಧರ ಕ್ಷೇತ್ರದಿಂದ ಕಣಕ್ಕಿಳಿದಿರುವ ಡಾ. ಧನಂಜಯ ಸರ್ಜಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಮತದಾರರ ಸಂಪರ್ಕದಲ್ಲಿದ್ದಾರೆ. ಮತದಾರರ ಸಮಸ್ಯೆ ಪರಿಹರಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೋಜೇಗೌಡ ತಮ್ಮ ಅಧಿಕಾರಾವಧಿಯಲ್ಲಿ ಹಲವು ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಕರಿಗೆ ವಿಶೇಷ ಬಡ್ತಿ, ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದು, ಕರೊನಾ ಸಂದರ್ಭದಲ್ಲಿ ಅನಾರೋಗ್ಯಕ್ಕೆ ಒಳಗಾದ ಶಿಕ್ಷಕ ಕುಟುಂಬಕ್ಕೆ ಸಹಾಯ ಮಾಡಿರುವುದು ಅವರ ಕಾರ್ಯತತ್ಪರತೆಗೆ ನಿದರ್ಶನ. ಡಾ. ಧನಂಜಯ ಸರ್ಜಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಬ್ಬರ ಗೆಲುವೂ ನಿಶ್ಚಿತ ಎಂದರು.
ಪ್ರಮುಖರಾದ ದಾದಾಪೀರ್, ಸಿದ್ದಪ್ಪ, ಜ್ಞಾನೇಶಪ್ಪ, ಪ್ರೇಮ್‌ಕುಮಾರ್, ಸಂಜಯ್, ಕನ್ನಪ್ಪ, ನಿಹಾಲ್, ನಿಖಿಲ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net