

ರಾಯಚೂರು: ಮುಂಬರುವ ಲೋಕಸಭೆ ಚುನಾವಣೆಗೆ ಮಾತ್ರ ಇಂಡಿಯಾ ಮೈತ್ರಿಕೂಟದಲ್ಲಿ ಆಮ್ ಆದ್ಮಿ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಯನ್ನು ಸೋಲಿಸುವುದು ಪಕ್ಷದ ಉದ್ದೇಶವಾಗಿದ್ದು, ಉಳಿದ ಸಂದರ್ಭದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಆಮ್ ಆದ್ಮಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಇದುವರೆಗೂ ದೇಶವನ್ನು ಆಳಿದ ಕಾಂಗ್ರೆಸ್, ಬಿಜೆಪಿಯಿಂದ ದೇಶದ ಉದ್ಧಾರ ಸಾಧ್ಯವಿಲ್ಲ ಎಂದು ಪರ್ಯಾ ರಾಜಕಾರಣ ಸೃಷ್ಟಿಸಲು ಪಕ್ಷದ ಲೋಕಸಭೆ ಚುನಾವಣೆ ಹೊರತುಪಡಿಸಿ ಉಳಿದ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದರು.
ದೇಶದಲ್ಲಿ ಉಚಿತ ಯೋಜನೆಗಳ ಮೂಲಕ ವಿಭಿನ್ನ ಆಡಳಿತ ನೀಡಲು ಸಾಧ್ಯವಿದೆ ಎಂದು ಪಕ್ಷದ ದೆಹಲಿ ಮತ್ತು ಪಂಜಾಬ್‌ನಲ್ಲಿ ತೋರಿಸಿ ಕೊಟ್ಟಿದೆ. ಜತೆಗೆ ಹೆಚ್ಚುವರಿ ಉಳಿತಾಯ ಬಜೆಟ್ ಮಂಡಿಸಿದೆ. ಉಚಿತ ಯೋಜನೆಯಿಂದ ಎಲ್ಲಿಯೂ ಆರ್ಥಿಕ ಹೊರೆಯಾಗಿಲ್ಲ. ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ರಾಜ್ಯದಲ್ಲಿ ನಕಲು ಮಾಡಿ ಜಾರಿಗೊಳಿಸಿದ್ದು ಅನುಷ್ಠಾನದಲ್ಲಿ ವಿಲವಾಗಿದೆ.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ತೆಗೆದಿಟ್ಟಿಲ್ಲ. ಎಸ್‌ಇಪಿ, ಟಿಎಸ್‌ಪಿಗೆ ತೆಗೆದಿಟ್ಟಿದ್ದ 34 ಸಾವಿರ ಕೋಟಿ ರೂ.ಗಳ್ಲಲಿ 11 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದೆ. ವಿದ್ಯುತ್ ಕಡಿತಗೊಳಿಸಿ ಅದೇ ಹಣದಲ್ಲಿ ಗೃಹ ಜ್ಯೋತಿಗೆ ನೀಡಲಾಗುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಕಮೀಷನ್ ವಸೂಲಿ ದಂಧೆಯಲ್ಲಿ ತೊಡಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ದೇಶಕ್ಕೆ ಅನ್ನ, ಚಿನ್ನ, ಬೆಳಕು ನೀಡುವ ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಕಡೆಗಣಿಸುತ್ತಿದೆ.
ಈ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ಹೋರಾಟ ರೂಪಿಸಲು ರಾಜ್ಯಾದ್ಯಂತ ಪ್ರವಾಸ ನಡೆಸಿ ಬನ್ನಿ ಕುಳಿತು ಮಾತಾಡೋಣ ಸಮಾವೇಶಗಳನ್ನು ನಡೆಸಲಾಗುತ್ತಿದೆ. ಜತೆಗೆ ಜನರಲ್ಲಿ ಲೂಟಿಕೋರರನ್ನು ಗೆಲ್ಲಿಸಬೇಡಿ ಎನ್ನುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ವೀರೇಶಕುಮಾರ, ಪದಾಕರಿಗಳಾದ ರುದ್ರಯ್ಯ ನವಲಿ ಹಿರೇಮಠ, ಅರ್ಜುನ ಹಲಗಿಗೌಡರ್, ಜಗದೀಶ, ರಾಜಾ ಶ್ಯಾಮಸುಂದರ ನಾಯಕ, ನುಸ್ರತ್ ಅಲಿ ಉಪಸ್ಥಿತರಿದ್ದರು.