ರಾಜ್ಯದ ಅಭಿವೃದ್ಧಿಗೆ ಮೈತ್ರಿಕೂಟ ಶ್ರಮ

sr jds
ಶೃಂಗೇರಿಯಲ್ಲಿ ಬಿಜೆಪಿ-ಜೆಡಿಎಸ್ ಮುಖಂಡರು, ಕಾರ್ಯಕರ್ತರು ವಿಜಯೋತ್ಸವ ಮೆರವಣಿಗೆ ನಡೆಸಿದರು. ಮುಖಂಡರಾದ ಡಾ. ಸುಧಾಕರ ಶೆಟ್ಟಿ, ಭರತ್ ಗಿಣಕಲ್, ಬಿ.ಶಿವಶಂಕರ್, ಕೆ.ಎಸ್.ರಮೇಶ್, ಹರೀಶ್ ವಿ.ಶೆಟ್ಟಿ ಇತರರಿದ್ದರು.
Published on

ಶೃಂಗೇರಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ. ತಾಲೂಕಿನ ಎರಡೂ ಪಕ್ಷಗಳ ಕಾರ್ಯಕರ್ತರ ಪರಿಶ್ರಮದ ಫಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಡಾ. ಸುಧಾಕರ ಶೆಟ್ಟಿ ತಿಳಿಸಿದರು.

ಶ್ರೀ ಶಂಕರಾಚಾರ್ಯ ವೃತ್ತದಲ್ಲಿ ಮಂಗಳವಾರ ವಿಜಯೋತ್ಸವದಲ್ಲಿ ಮಾತನಾಡಿ, ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ ಯೋಜನೆಗಳು ಅಪೂರ್ವ. ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಎನ್‌ಡಿಎ ಮತ್ತೆ ಆಡಳಿತದ ಚುಕ್ಕಾಣಿ ಹಿಡಿದು ದೇಶದ ಪ್ರಗತಿಗೆ ಕೊಡುಗೆ ನೀಡಲಿದೆ. ರಾಜ್ಯದಲ್ಲಿ ಮೈತ್ರಿಕೂಟ ರಾಜ್ಯದ ಅಭಿವೃದ್ಧಿಗೆ ದುಡಿಯಲಿದೆ ಎಂದು ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ತಲಗಾರು ಉಮೇಶ್ ಮಾತನಾಡಿ, ವಿಪಕ್ಷದ ಗ್ಯಾರಂಟಿ ಯೋಜನೆಗಳಿಂದ ಅವರು ಹೆಚ್ಚು ಸ್ಥಾನ ಗಳಿಸಿದ್ದಾರೆ ಎಂದರು.
ಮುಖ್ಯಬೀದಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದರು. ಪಟ್ಟಣ, ಕಿಕ್ರೆ, ಮೆಣಸೆ, ಮಸಿಗೆ ಸೈಟ್ ಇತ್ಯಾದಿ ಕಡೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net