ಆಶ್ರಯ ಫಲಾನುಭವಿಗಳಿಗೆ ಭೂಮಿ ಹಂಚಿಕೆ ಮಾಡಿ

Untitled design
ಸಿರವಾರ ತಾಪಂ ಕಚೇರಿ ಮುಂದೆ ದಲಿತ ಸಂಘಷರ್ ಸಮಿತಿ ಪದಾಧಿಕಾರಿಗಳು ಧರಣಿ ನಡೆಸಿದರು. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಂಜಲದಿನ್ನಿ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಎಂ.ಮನೋಹರ ಸಿರವಾರ, ರಾಜು ಬೊಮ್ಮನಾಳ, ತಾಲೂಕು ಘಟಕದ ಅಧ್ಯಕ್ಷ ಚಂದಪ್ಪ ಕವಿತಾಳ,ಮೌನೇಶ ಕವಿತಾಳ ಇದ್ದರು.
Published on



ಸಿರವಾರ:ತಾಲೂಕಿನ ಗಣದಿನ್ನಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯನ್ನು ಆಶ್ರಯ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಒತ್ತಾಯಿಸಿ ತಾಪಂ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶನಿವಾರ ಧರಣಿ ನಡೆಸಿದರು.

ಗಣದಿನ್ನಿ ಗ್ರಾಮದ ಸರ್ವೆ ನಂ.86ರ 5 ಎಕರೆ ಭೂಮಿಯನ್ನು ಸರ್ಕಾರ ಈಗಾಗಲೆ ಖರೀದಿಸಿದೆ. ಆದರೆ ಅದು ಇನ್ನೂ ಖಾಸಗಿ ವ್ಯಕ್ತಿಗಳ ವಶದಲ್ಲಿದೆ. ಈ ಭೂಮಿಯನ್ನು ಆಶ್ರಯ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಪಿಡಿಒ ಮತ್ತು ಕೆಲ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನೂರಾರು ಬಡ ಎಸ್ಸಿ, ಎಸ್ಟಿ, ಹಿಂದುಳಿದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರಿ ಭೂಮಿಯಲ್ಲಿ ಅಧಿಕಾರಿಗಳ ಕುಮ್ಮಕ್ಕಿನಿಂದ ಖಾಸಗಿ ವ್ಯಕ್ತಿಗಳು ಬೆಳೆ ಬೆಳೆಯುತ್ತಿದ್ದಾರೆ ಎಂದು ಆಗ್ರಹಿಸಿದರು.


30 ವರ್ಷಗಳಿಂದ ಗಣದಿನ್ನಿ ಗ್ರಾಪಂಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್ ಮಲ್ಲೇಶನಿಂದ ಅಕ್ರಮ ನಡೆಯುತ್ತಿದ್ದು, ಕೂಡಲೇ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಂಜಲದಿನ್ನಿ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಎಂ.ಮನೋಹರ ಸಿರವಾರ, ರಾಜು ಬೊಮ್ಮನಾಳ, ತಾಲೂಕು ಘಟಕದ ಅಧ್ಯಕ್ಷ ಚಂದಪ್ಪ ಕವಿತಾಳ, ಪ್ರಮುಖರಾದ ಮೌನೇಶ ಕವಿತಾಳ, ಈರೇಶ ನಾಯಕ ಗಣದಿನ್ನಿ, ಹುಲಿಗೆಪ್ಪ ಸೈದಾಪೂರ್, ಮಲ್ಲಪ್ಪ ಮಲ್ಲಟ, ಹುಲಿಗೆಪ್ಪ ಸಿರವಾರ, ಅಮರೇಶ ಮಲ್ಲಟ, ಜಂಬಣ್ಣ, ಹನುಮಂತ ಬಲ್ಲಟಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net