ವಿಶೇಷ ವರ್ಗದವರಿಗೆ ನಿವೇಶನ ಮಂಜೂರು ಮಾಡಿ

20-01-Shiva-2
ವಿಶೇಷ ವರ್ಗದ ಜನರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಸ್ಲಂ ನಿವಾಸಿಗಳ ಕ್ರಿಯಾವೇದಿಕೆಯಿಂದ ಶನಿವಾರ ಮನವಿ ಸಲ್ಲಿಸಲಾಯಿತು. ವೇದಿಕೆ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ಪದಾಕಾರಿಗಳಾದ ನೂರ್‌ಜಹಾನ್, ಮಾಧವರೆಡ್ಡಿ, ನಾಗರಾಜ, ವೆಂಕಟೇಶ ಭಂಡಾರಿ, ಕೆ.ಪಿ.ಅನಿಲಕುಮಾರ, ಜಿ.ರಾಜು, ಮಹೇಶ, ಹುಲಿಗೆಮ್ಮ ಇದ್ದರು.
Published on

ರಾಯಚೂರು: ವಿಶೇಷ ವರ್ಗದಲ್ಲಿ ಬರುವ ವಿಧವೆಯರು, ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರಿಗೆ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ನಗರದ ಜಿಲ್ಲಾಕಾರಿ ಕಚೇರಿ ಮುಂದೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ವಿಶೇಷ ವರ್ಗದ ಜನರ ಸಮೀಕ್ಷೆ ಮಾಡಿ ನಿವೇಶನ ಇಲ್ಲದಿರುವವರು, ಬಾಡಿಗೆ ಮನೆಯಲ್ಲಿರುವವರನ್ನು ಗುರುತಿಸಿ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ವಿಶೇಷ ವರ್ಗದ ಜನರು ಆರ್ಥಿಕವಾಗಿ ಹಿಂದುಳಿದಿದ್ದು, ಸ್ವಂತ ನಿವೇಶನ ಖರೀದಿ ಮಾಡಲು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಸರ್ವೇ ನಂ.1403, 1553, 802, 928 ಮತ್ತು ಇತರೆ ಸರ್ಕಾರಿ ಭೂಮಿಗಳನ್ನು ಗುರುತಿಸಿ ವಸತಿಹೀನರಿಗೆ ನಿವೇಶ ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು.
ನಗರದಲ್ಲಿ ವಿಶೇಷ ವರ್ಗದ ಸುಮಾರು 10 ಸಾವಿರಕ್ಕೂ ಹೆಚ್ಚಿನ ಜನರಿದ್ದು, ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಪ್ರತಿ ತಿಂಗಳು ಬಾಡಿಗೆ ಕಟ್ಟಡಲು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನಿವೇಶನ ಹಂಚಿಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಜನಾರ್ದನ ಹಳ್ಳಿಬೆಂಚಿ, ಪದಾಕಾರಿಗಳಾದ ನೂರ್‌ಜಹಾನ್, ಮಾಧವರೆಡ್ಡಿ, ನಾಗರಾಜ, ವೆಂಕಟೇಶ ಭಂಡಾರಿ, ಕೆ.ಪಿ.ಅನಿಲಕುಮಾರ, ಜಿ.ರಾಜು, ಮಹೇಶ, ಹುಲಿಗೆಮ್ಮ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net