ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ

05 MDG 3
ಮುಂಡರಗಿಯಲ್ಲಿ ಶನಿವಾರ ಸಾರ್ವಜನಿಕರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ದೇವಪ್ಪ ಇಟಗಿ, ಸಿ.ಬಿ. ಮಟ್ಟಿ, ಅಡಿವೆಪ್ಪ ಚಲವಾದಿ, ನಾಗರಾಜ ಮುರಡಿ, ಶಿವರಾಜ ಅಸುಂಡಿ, ಮಂಜುನಾಥ ಕಟ್ಟಿಮನಿ, ಇತರರಿದ್ದರು.
Published on

ಮುಂಡರಗಿ: ಪಡಿತರ ಚೀಟಿಗಾಗಿ ಹೊಸ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗೆ ಶೀಘ್ರದಲ್ಲೇ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಶನಿವಾರ ಪಟ್ಟಣದಲ್ಲಿ ಸಾರ್ವಜನಿಕರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಮುಂಡರಗಿ ಮಂಡಳ ಪ್ರಧಾನ ಕಾರ್ಯದರ್ಶಿ ದೇವಪ್ಪ ಇಟಗಿ ಮಾತನಾಡಿ, ಹಲವು ದಿನಗಳಿಂದ ಪಡಿತರ ಚೀಟಿ ಪಡೆಯುವುದಕ್ಕೆ ಹೊಸ ಅರ್ಜಿ ಹಾಕಲು ಅವಕಾಶವಿಲ್ಲ. ಜನರು ಸರ್ಕಾರದ ಯೋಜನೆ ಮತ್ತು ಸೌಲಭ್ಯಗಳನ್ನು ಪಡೆಯಲು ತೊಂದರೆ ಅಭವಿಸುವಂತಾಗಿದೆ. ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ. ಸರ್ಕಾರದ ಯೋಜನೆಗೆ ಫಲಾನುಭವಿಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರವೇ ತಾಂತ್ರಿಕ ತೊಂದರೆಗಳನ್ನು ಉಂಟು ಮಾಡಿರುವ ಅನುಮಾನ ಜನರನ್ನು ಕಾಡುತ್ತಿದೆ ಎಂದು ದೂರಿದರು.

ವಕೀಲ ಸಿ.ಬಿ. ಮಟ್ಟಿ ಮಾತನಾಡಿ, ಪಡಿತರ ಚೀಟಿ ತಿದ್ದುಪಡಿಗಾಗಿ ನಿತ್ಯವೂ ಕಚೇರಿಗೆ, ಪಡಿತರ ವಿತರಣೆ ಕೇಂದ್ರ, ಸೈಬರ್ ಸೆಂಟರ್‌ಗಳಿಗೆ ಅಲೆದಾಡುವಂತಾಗಿದೆ. ತಿದ್ದುಪಡಿ, ಹೆಸರು ಸೇರ್ಪಡೆ ಆಗದೆ ಜನರು ಸಮಸ್ಯೆಗೆ ಒಳಗಾಗಿದ್ದಾರೆ. ಸರ್ಕಾರ ಹೊಸ ಅರ್ಜಿ ಹಾಕುವುದಕ್ಕೆ ಮತ್ತು ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು. ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಶೀಘ್ರದಲ್ಲೇ ಪಡಿತರ ಚೀಟಿ ವಿತರಿಸಬೇಕು ಎಂದರು.

ತಹಸೀಲ್ದಾರ್ ಪರವಾಗಿ ಉಪತಹಸೀಲ್ದಾರ್ ಎಸ್.ಎಸ್. ಬಿಚ್ಚಾಲಿ ಮನವಿ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net