ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

18 hkr 03- MLA BANAKARA
Published on

ಹಿರೇಕೆರೂರ: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ ಹಾಗೂ ಚೀಟಿಯನ್ನು ಬೇರೆ ಊರುಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದ್ದು, ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.


ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಪಡಿತರ ತಿದ್ದುಪಡಿಗೆ ಅವಕಾಶ ಕಲ್ಪಿಸಿರುವ ಹಿನ್ನ್ನೆಲೆಯಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.


ಪಡಿತರ ಚೀಟಿಗೆ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ ಹಾಗೂ ಚೀಟಿಯನ್ನು ಬೇರೆ ಊರುಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಆ. 18ರಿಂದ 31ರವರೆಗೆ, ಬೆಳಗ್ಗೆ 12 ರಿಂದ ಸಂಜೆ 4 ಗಂಟೆಯವರೆಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು, ಶಿಕ್ಷಣದ ಸೌಲಭ್ಯಕ್ಕಾಗಿ ಮಕ್ಕಳ ಹೆಸರು ಸೇರ್ಪಡೆ ಮಾಡಿಕೊಳ್ಳುವವರು, ಹೊಸದಾಗಿ ಮದುವೆಯಾಗಿ ಬಂದ ಹೆಣ್ಣು ಮಕ್ಕಳ ಹೆಸರು ಸೇರ್ಪಡೆ ಮಾಡಿಕೊಳ್ಳುವವರು ಗ್ರಾಮ ಪಂಚಾಯಿತಿ ಕಚೇರಿ, ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಿದ ಪ್ರತಿಯನ್ನು ಆಹಾರ ಇಲಾಖೆ ಕಚೇರಿಗೆ ಹಾಜರುಪಡಿಸಿ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದರು.


ತಾಲೂಕಿನ ದಾಸನಕೊಪ್ಪ ಗ್ರಾಮದ ಹರ್ಷ ತಳವಾರ ಎಂಬ ಬಾಲಕನಿಗೆ ಹೃದಯದಲ್ಲಿ ರಂದ್ರವಾದ ನಿಮಿತ್ತ ಶಸ್ತ್ರಚಿಕಿತ್ಸೆಗೆ ಪಾಲಕರು 5ರಿಂದ 6 ಲಕ್ಷ ಖರ್ಚು ಭರಿಸಬೇಕಾಗಿತ್ತು. ಸರ್ಕಾರ ಪಡಿತರ ಚೀಟಿಗೆ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿಗೆ ಅವಕಾಶ ಕಲ್ಪಿಸಿದ ಹಿನ್ನ್ನೆಲೆಯಲ್ಲಿ ಬಾಲಕನ ಹೆಸರನ್ನು ಸೇರ್ಪಡೆ ಮಾಡಿ ಪಡಿತರ ಚೀಟಿ ಮಂಜೂರು ಮಾಡಿ ಹೊಸ ಪಡಿತರ ಚೀಟಿ ನೀಡಲಾಯಿತು. ತಹಸೀಲ್ದಾರ್ ಎಚ್. ಪ್ರಭಾಕರಗೌಡ, ಪಪಂ ಮುಖ್ಯಾಧಿಕಾರಿ ಪಂಪಾಪತಿ ನಾಯ್್ಕ ದುರ್ಗಪ್ಪ ನೀರಲಗಿ, ಶಿವಣ್ಣ ಗಡಿಯಣ್ಣನವರ, ಶಿವರಾಜ ಹರಿಜನ, ವಿನಯ ಪಾಟೀಲ, ಆನಂದ ನಾಯ್ಕರ, ಭರಮಪ್ಪ ಡಮ್ಮಳ್ಳಿ, ಹರೀಶ ದಾಸರ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net