

ಬೆಂಗಳೂರು:ಲೋಕಸಭಾ ಚುನಾವಣೆ ಮುಗಿದ ಬಳಿಕ ಹೊಸದಾಗಿ ಬಿಪಿಎಲ್, ಎಪಿಎಲ್ ಕೋರಿ ಆಹಾರ ಇಲಾಖೆ ಸಲ್ಲಿಸಿರುವ ಅರ್ಜಿಗಳ ವಿಲೇಗೆ ಅನುಮತಿ ಸಿಗುವ ಸಾಧ್ಯತೆ ಇದೆ.
ಬಾಕಿ ಉಳಿದಿರುವ ಅರ್ಜಿಗಳ ವಿಲೇಗೆ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದರು. ಆದರೆ, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಮುಗಿದ ಬಳಿಕ ಸರ್ಕಾರ ಅರ್ಜಿಗಳ ವಿಲೇಗೆ ಅನುಮತಿ ನೀಡುವ ಸಾಧ್ಯತೆ ಇದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎ್ಎಸ್ಎ) ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04 ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಲಾನುಭವಿಗಳಿಗೆ 1,03,70,669 ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ ಸದ್ಯ 3,92,54,052 ಲಾನುಭವಿಗಳಿಗೆ 1,16,98,551 ರೇಷನ್ ಕಾರ್ಡ್ಗಳನ್ನು ನೀಡಲಾಗಿದೆ. ನಿಗದಿಗಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್ ಕಾರ್ಡ್ ನೀಡಲಾಗಿದೆ. ಹೊಸ ರೇಷನ್ ಕಾರ್ಡ್ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರ ಅನುಮತಿ ಕೊಟ್ಟರೆ "ಅನರ್ಹರ ಪತ್ತೆ ಮೊದಲು; ಪಡಿತರ ಚೀಟಿ ವಿತರಣೆ ಆನಂತರ' ಎಂಬ ಸೂತ್ರವನ್ನು ಇಲಾಖೆ ಅಳವಡಿಸಿಕೊಂಡು ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ.
ರೇಷನ್ ಕಾರ್ಡ್ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಸೆ.1ರಿಂದ ಸೆ.10ರವರೆಗೆ ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ.
ಅರ್ಜಿ ಪರಿಶೀಲಿಸಿರುವ ಇಲಾಖೆ
ಹಿಂದಿನ ಬಿಜೆಪಿ ಸರ್ಕಾರವಿದ್ದಾಗ, ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿಪಡಿಸಿದ ಮಾನದಂಡ ಆಧಾರದಲ್ಲಿ ಪರಿಶೀಲಿಸಬೇಕು. ಯಾವುದೇ ಅರ್ಜಿಯೂ ಅನರ್ಹವಾಗಿದ್ದಲ್ಲಿ ಅದನ್ನು ಎಪಿಎಲ್ ಕಾರ್ಡ್ಗೆ ಶಿಾರಸ್ಸು ಮಾಡಬೇಕು. ಪ್ರತಿ ಅರ್ಜಿ ಪರಿಶೀಲಿಸುವ ವೇಳೆ ಅರ್ಜಿದಾರರು ಜಂಟಿ ಕುಟುಂಬವೇ, ಜಂಟಿ ಕುಟುಂಬದಿಂದ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸುವವರೇ, ಎಪಿಎಲ್ ಚೀಟಿ ಹೊಂದಿರುವವರೇ ಅಥವಾ ಈಗಾಗಲೇ ಯಾವುದಾದರೂ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅರ್ಜಿಗಳ ಅರ್ಹತೆ ಮತ್ತು ಅನರ್ಹತೆ ಬಗ್ಗೆ ಪರಿಶೀಲಿಸಬೇಕೆ ಹೊರತು ಹೊಸ ಕಾರ್ಡ್ನ್ನು ಮಂಜೂರು ಮಾಡಬಾರದು ಎಂದು ಆದೇಶಿಸಿತ್ತು. ಅದರಂತೆ, ಬಾಕಿ ಉಳಿದಿರುವ ಅರ್ಜಿಗಳನ್ನು ಮೇಲಿನ ನಿಯಮಗಳಂತೆ ಇಲಾಖೆ ಪರಿಶೀಲಿಸಿ ಮಂಜೂರಾತಿಗೆ ಸಿದ್ಧತೆ ಮಾಡಿಕೊಂಡಿದೆ.