

ನವಲಗುಂದ: ತಾಲೂಕಿನ ಹಿರಿಯ ಉಪನೋಂದಣಿ ಕಚೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪ್ರಸಕ್ತ ಸಾಲಿಗೆ ತಾಲೂಕು ಮಾರುಕಟ್ಟೆ ಮೌಲ್ಯಮಾಪನಾ ಉಪಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ ಎಂದು ಪ್ರಭಾರಿ ಉಪನೋಂದಣಾಧಿಕಾರಿ ನಿಂಗಪ್ಪ ಮುಟಗೇಕರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪರಿಷ್ಕರಿಸಿದ ಸ್ಥಿರಾಸ್ತಿ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ಸಾರ್ವಜನಿಕರ ಆಕ್ಷೇಪಣೆಗಳಿಗಾಗಿ ಕಚೇರಿಯ ಸೂಚನಾ ಫಲಕದಲ್ಲಿ ಸೆ. 1ರಂದು ಪ್ರಕಟಿಸಲಾಗಿದೆ. ಪರಿಷ್ಕರಿಸಿದ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದರೆ ಸೂಕ್ತ ದಾಖಲೆಗಳೊಂದಿಗೆ 15 ದಿನಗಳೊಳಗಾಗಿ ನವಲಗುಂದ ಉಪನೋಂದಣಾಧಿಕಾರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.