25ರಂದು ಅಳ್ನಾವರ ಬಂದ್ ಕರೆ

Screenshot_20230923-203120_1-1.jpg
Published on

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಳ್ನಾವರ, ಅಣ್ಣಿಗೇರಿಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು, ರೈತರ ಸಾಲ ಸಂರ್ಪೂಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಸೆ. 25ರಂದು ಅಳ್ನಾವರ ಬಂದ್ ಕೆರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಳ್ನಾವರ ತಾಲೂಕು ಅಧ್ಯಕ್ಷ ಅಲ್ಲಾಭಕ್ಷ ಕುಂದುಬೈನವರ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿದೆ. ಬಿತ್ತಿದ ಬೀಜ ಸರಿಯಾಗಿ ಹುಟ್ಟದೇ ನಷ್ಟವಾಗಿದೆ. ಆದರೂ ಸರ್ಕಾರ ಜಿಲ್ಲೆಯ ಮೂರು ತಾಲೂಕುಗಳನ್ನು ಬರಪಟ್ಟಿಯಿಂದ ಹೊರಗೆ ಇಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಈ ಭಾಗದ ರೈತರಿಗಾದ ದೊಡ್ಡ ಅನ್ಯಾಯ. ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಅಧಿಕಾರಿಗಳು ಅನ್ಯಾಯ ಸರಿಪಡಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ರೈತರು ಪಡೆದ ಬೆಳೆಸಾಲ ಹಾಗೂ ಇತರೆ ಸಾಲಗಳನ್ನು ಸಂರ್ಪೂಣ ಮನ್ನಾ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ರೈತರು ಭಾಗವಹಿಸಬೇಕೆಂದು ವಿನಂತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net