ಅತಿ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷ ಬಿಜೆಪಿ

16- aln bjp
Published on

ಅಳ್ನಾವರ: ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ರಾಜಕೀಯ ಪಕ್ಷಗಳಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ. ಕಾರ್ಯಕರ್ತರ ಸುಭದ್ರ ಅಡಿಪಾಯದಡಿ ಬೆಳೆದು ನಿಂತಿರುವ ಏಕೈಕ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದರು.

ಅಳ್ನಾವರ ಮಂಡಳದ ಮುಗದ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಭಿವೃದ್ಧಿ ಎಂಬುದು ಕನಸಿನ ಮಾತಾಗಿದೆ. ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು. ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಪತನವಾದರೂ ಅಚ್ಚರಿಯಿಲ್ಲ. ರಾಜ್ಯ ಸರ್ಕಾರದ ಆಡಳಿತ ವಿಫಲತೆಯನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಪಕ್ಷ ನೀಡಿರುವ ಗುರಿ ಮೀರಿ ಸದಸ್ಯತ್ವ ಮಾಡಿ ಪಕ್ಷವನ್ನು ಮತ್ತಷ್ಟು ಬಲ ಪಡಿಸುವ ಕೆಲಸ ಮಾಡಬೇಕು ಎಂದರು.

ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ ಮಾತನಾಡಿ, ನಿಜವಾದ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ ಸಾಮಾಜಿಕವಾಗಿ,ಧಾರ್ವಿುಕವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಪ್ರಧಾನಿ ಮೋದಿ ಅವರ ಜನಪ್ರಿಯ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಲಾಗುವುದು ಎಂದರು.

ಮಂಡಳ ಅಧ್ಯಕ್ಷ ಕಲ್ಮೇಶ ಬೇಲೂರ, ಮುಗದ ಗ್ರಾಮದ ಹಿರಿಯರಾದ ಕಲ್ಲಪ್ಪ ಹಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗುಂಡಗೋವಿ ಮಾತನಾಡಿದರು.

ಭರತೇಶ ಪಾಟೀಲ, ಕಿರಣ ಪಾಟೀಲ ಕುಲಕರ್ಣಿ, ಶಿವಾಜಿ ಡೊಳ್ಳಿನ, ನಿಂಗಪ್ಪ ಘಾಟೀನ, ಡಾ. ಸಂಜಯ ಚಂದರಗಿಮಠ, ಶ್ರೀಕಾಂತ ಕ್ಯಾತಪ್ಪನವರ, ಮಹಾರುದ್ರ ಗುಡೆನ್ನವರ, ಕಲ್ಲಪ್ಪ ನೀರಲಗಿ, ಮಂಜುನಾಥ ಶೆರೆವಾಡ, ಮಲ್ಲಪ್ಪ ಗಾಣಿಗೇರ, ಸಂದೀಪ ಪಾಟೀಲ, ಯಲ್ಲಾರಿ ಹುಬ್ಬಳಿಕರ, ಪ್ರವೀಣ ಪವಾರ, ಪ್ರಕಾಶ ಗಾಣಿಗೇರ, ಲಿಂಗರಾಜ ಮೂಲಿಮನಿ ಇತರರು ಇದ್ದರು.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ
ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದಿಂದ ಅಭಿವೃದ್ಧಿ ಕುಂಠಿತಗೊಂಡಿದೆ. ಇದನ್ನು ಮರೆಮಾಚಲು ಸಚಿವ ಸಂತೋಷ ಲಾಡ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ವಿಪ ಮಾಜಿ ಸದಸ್ಯ ನಾಗರಾಜ ಛಬ್ಬಿ ಆರೋಪಿಸಿದರು. ಮುಗದ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಬೇಗ ಪರಿಹಾರ ಕೊಡಿಸಬೇಕು. ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆ ಅಭಿವೃದ್ಧಿ ಮಾಡಬೇಕು. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು .

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net